:ಕಾರ್ಕಳ ತಾಲೂಕು ಮರಾಠಿ ಸಮಾಜ ಸೇವಾ ಸಂಘದ  ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ.                                      

ಕಾರ್ಕಳ:ಹೆಬ್ರಿ ಹಾಗೂ ಕಾರ್ಕಳ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಉಮೇಶ್ ನಾಯ್ಕ್ ಸೂಡ ಅವರ ಅಧ್ಯಕ್ಷತೆಯಲ್ಲಿ ಸೆ 26 ರಂದು ಕಾರ್ಕಳ ಲ್ಯಾಂಪ್ಸ್ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷರಾದ ಉಮೇಶ್ ಸೂಡ ಮಾತನಾಡಿ, ಸಮುದಾಯದ ಸಬಲೀಕರಣಕ್ಕಾಗಿ ಸಂಘಟನೆ ಅನಿವಾರ್ಯ, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಯಲ್ಲಿ  ಕ್ರಿಯಾಶೀಲವಾಗಿ ತೊಡಗಿಕೊಂಡಾಗ ವ್ಯಕ್ತಿತ್ವ ವಿಕಸನದ ಜತೆಗೆ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.                         

ಈ ಸಂದರ್ಭದಲ್ಲಿ ಎಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘದ ಕಾರ್ಯಕಾರಿ ಸಮಿತಿ‌, ಮಹಿಳಾ ಘಟಕ ಹಾಗೂ ಯುವ ಘಟಕಗಳ ಸಮಿತಿಗೆ  ಮುಂದಿನ ಅವಧಿಗೆ ನೂತನ  ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.                                  

 ಸಂಘದ ಪದಾಧಿಕಾರಿಗಳಾದ ಸಂಘದ ಮಾಜಿ  ಅಧ್ಯಕ್ಷರಾದ ರಾಘವ ನಾಯ್ಕ್ ಮುದ್ರಾಡಿ, ನಿವೃತ್ತ ಉಪತಹಶೀಲ್ದಾರ್ ಕೆ.ಪಿ ನಾಯ್ಕ್, ಪಶುಸಂಗೋಪನೆ ಇಲಾಖೆಯ ಹಿರಿಯ ಪರಿವೀಕ್ಷಕರಾದ ಶೇಖರ ನಾಯ್ಕ್ ಮುದ್ರಾಡಿ,ಶಿವಪುರ ಪಂಚಾಯಿತಿ ಮಾಜಿ ಅಧ್ಯಕ್ಷೆ ಸುಗಂಧಿ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.                                    
ರೂಪೇಶ್  ನಾಯ್ಕ್ ಸ್ವಾಗತಿಸಿ,    ದೈಹಿಕ ಶಿಕ್ಷಣ ಶಿಕ್ಷಕ ಶೇಖರ್ ನಾಯ್ಕ್ ಕಡ್ತಲ ಕಾರ್ಯಕ್ರಮ ನಿರೂಪಿಸಿ ಸುಗಂಧಿ ನಾಯ್ಕ್ ಶಿವಪುರ  ವಂದಿಸಿದರು

ಜಾಹೀರಾತು