April 2020

ಉಡುಪಿಯಲ್ಲೂ ಸೈನಿಕರು v/s ಪೋಲಿಸರ ವಾಗ್ಯುಧ್ಧ-Times of karkala

ಲಾಕ್‍ಡೌನ್ ಸಂದರ್ಭ ಎನ್‍ಸಿಸಿ ಮತ್ತು ಸೈನ್ಯದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಒಳಗೆ ವಾಲಿಬಾಲ್ ಮತ್ತು ಕಬಡ್ಡಿ ಆಟ ಆಡುವುದರಲ್ಲಿ ತಲ್ಲೀನರಾಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


ಆದಿ ಉಡುಪಿಯ ಎನ್‍ಸಿಸಿ ಮೈದಾನಕ್ಕೆ ಉಡುಪಿಯ ಪೊಲೀಸರು ಪ್ರವೇಶಿಸಿ, ಕೊರೊನಾ ಲಾಕ್‍ಡೌನ್ ಸಂದರ್ಭದ ನಿಯಮಗಳನ್ನು ಪಾಲಿಸಿ ಎಂದು ತಾಕೀತು ಮಾಡಿದ್ದಾರೆ. ಈ ಸಂದರ್ಭ ಸೈನಿಕರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಸರ್ಕಾರದ ನಿಯಮಗಳನ್ನು ನೀವು ಪಾಲಿಸುತ್ತಿಲ್ಲ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಸೈನಿಕಾಧಿಕಾರಿಗೆ ತಾಕೀತು ಮಾಡಿದ್ದಾರೆ. ರಾಜ್ಯ ಸರ್ಕಾರ ಅಧಿಕಾರಿಗಳು ಮತ್ತು ಪೊಲೀಸರು ನಮ್ಮ ವ್ಯಾಪ್ತಿಗೆ ಪ್ರವೇಶಿಸಬಾರದು ಎಂದು ಅವರು ಹೇಳಿದ್ದು ಮಾತಿಗೆ ಮಾತು ಬೆಳೆಯಲು ಕಾರಣವಾಯಿತು.

ಲಾಕ್‍ಡೌನ್ ಸಂದರ್ಭದಲ್ಲಿ ನಮಗೊಂದು ನ್ಯಾಯ, ಸೈನಿಕರಿಗೊಂದು ನ್ಯಾಯ ಎಂದು ಪೊಲೀಸರಿಗೆ ಸ್ಥಳೀಯರು ದೂರು ನೀಡಿದ್ದರು. ಪೊಲೀಸರ ಒತ್ತಡಕ್ಕೆ ಮಣಿದ ಸೈನಿಕರು ಲಾಕ್‍ಡೌನ್ ಮುಗಿಯುವ ತನಕ ನಾವು ಗೇಮ್ಸ್ ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
 ಜಾಹೀರಾತು
 ಜಾಹೀರಾತು
 ಜಾಹೀರಾತು

ಬಾವಿ ಕೊರೆದ ಕಾರ್ಕಳದ ಪವರ್‌ ಲಿಫ್ಟರ್‌ ಅಕ್ಷತಾ ಪೂಜಾರಿ 

ಕಾರ್ಕಳ:ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿರುವ ಮನೆಗೆ ಬಂದಿರುವ ಅಕ್ಷತಾ ಇತರರಂತೆ ಮನೆಯಲ್ಲಿ ಕುಳಿತು ಟೈಮ್‌ ವೇಸ್ವ್‌ ಮಾಡಲಿಲ್ಲ.ಅಂತಾರಾಷ್ಟ್ರೀಯ ಪವರ್‌ ಲಿಫ್ಟಿಂಗ್‌ನಲ್ಲಿ 3 ಚಿನ್ನದ ಪದಕ ಗೆದ್ದಿರುವ, ಏಕಲವ್ಯ ಪ್ರಶಸ್ತಿ ವಿಜೇತೆ ಅಕ್ಷತಾ ಪೂಜಾರಿ ಬೋಳ  ಈ ಲಾಕ್‌ಡೌನ್‌ ದಿನಗಳು ಸಾರ್ಥಕವಾಗಿ ಕಳೆದಿದ್ದಾರೆ. ಲಾಕ್‌ಡೌನ್ ಸಂದರ್ಭ ಬಾವಿ ಕೊರೆದಿದ್ದು  ಫಿಟ್‌ನೆಸ್ ಕಾಪಾಡೋದರ ಜೊತೆ ನೀರೂ ಸಿಕ್ಕಿದೆ. 

ಸತತ ಆರು ದಿನಗಳ ಕಾಲ ತನ್ನ ಮೂವರು ಅಣ್ಣಂದಿರೊಂದಿಗೆ  ಬಾವಿಕೊರೆದ  ಅಕ್ಷತಾ ಅಂದು ಕೊಂಡಂತೆ ನಿರಾಸೆಯಾಗಲಿಲ್ಲ.ಎಪ್ರಿಲ್‌ 18 ರಂದು ಬಾವಿ ತೋಡಲು ಪ್ರಾರಂಬಿಸಿದ ನಂತರ 25 ಅಡಿ ತೋಡಿದ ನಂತರ  .ಎಪ್ರಿಲ್‌  24 ರಂದು  ಶುಕ್ರವಾರ ತನ್ನ ಕಠಿಣ ಪರಿಶ್ರಮದಂತೆ  ತಾನು ತೋಡಿದ ಬಾವಿಯಲ್ಲಿ ನೀರು ಚಿಮ್ಮಿದೆ.

ಅ ಎಲ್ಲ ಸರಿಯಾಗಿದ್ದರೆ, ಅಕ್ಷತಾ ಥೈವಾನ್‌ನಲ್ಲಿ ಈಗ ನಡೆಯಬೇಕಾಗಿದ್ದ ಅಂತಾರಾಷ್ಟ್ರೀಯ ಪವರ್‌ ಲಿಫ್ಟಿಂಗ್‌ ಕೂಟದಲ್ಲಿ ಭಾಗವಹಿದಬೇಕಾಗಿತ್ತು.ಆದರೆ ಲಾಕ್‌ಡೌನ್‌ನಿಂದಾಗಿ ಅತ್ತ ಥೈವಾನೂ ಇಲ್ಲ, ಇತ್ತ ಪ್ರಾಕ್ಟೀಸೂ ಇಲ್ಲದಂತಾಗಿದೆ.

ಅಕ್ಷತಾ ರಾಜ್ಯಮಟ್ಟದಲ್ಲಿ 10 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ 5 ಬಾರಿ ಸ್ಟ್ರಾಂಗ್‌ ವುಮನ್‌ ಪ್ರಶಸ್ತಿ,ರಾಷ್ಟ್ರಮಟ್ಟದಲ್ಲಿ 10 ಚಿನ್ನ 2 ಬೆಳ್ಳಿ ಪದಕಗಳೊಂದಿಗೆ 4 ಬಾರಿ ಸ್ಟ್ರಾಂಗ್‌ ವುಮನ್‌ ಪ್ರಶಸ್ತಿ ಗೆದ್ದಿದ್ದಾರೆ. ಏಷ್ಯಾ ಮಟ್ಟದಲ್ಲಿ 4 ಬಾರಿ ಚಿನ್ನ,ಕಾಮನ್‌ವೆಲ್ತ್‌ ಕೂಟದಲ್ಲಿ 8 ಚಿನ್ನ, ವಿಶ್ವ ಮಟ್ಟದಲ್ಲಿ 2 ಚಿನ್ನದ ಪದಕ ಗೆದ್ದಿದ್ದಾರೆ.ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
 ಜಾಹೀರಾತು
 ಜಾಹೀರಾತು
 ಜಾಹೀರಾತು

"ನಾನೀಗ ವೈದ್ಯ ಲೋಕಕ್ಕೆ ಟ್ರಯಲ್‌ ಆಂಡ್‌ ಎರರ್‌ ಆಟದ ವಸ್ತು"
ಖ್ಯಾತ ಬಾಲಿವುಡ್‌ ನಟ ಇರ್ಫಾನ್‌ ಖಾನ್‌ ನಿಧನ
ಮುಂಬೈ: ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ (53) ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ವಿಧಿವಶರಾಗಿರುವುದಾಗಿ ಮೂಲಗಳು ತಿಳಿಸಿವೆ.


ಹೀಗೊಂದು ಅವರದೇ ಬರಹ.
"ನ್ಯೂರೋನ್‌ ಡಾಕ್ರೈನ್‌ ಕ್ಯಾನ್ಸರ್‌ ನನ್ನ ಆವರಿಸಿದೆ. ಈ ಹೆಸರೇ ನನ್ನ ಶಬ್ದಕೋಶಕ್ಕೆ ಹೊಸತು. ಇದು ತೀರಾ ಅಪರೂಪದ ಕ್ಯಾನ್ಸರ್​​ ರೋಗ. ಇದರ ಬಗ್ಗೆ ನಡೆದ ಅಧ್ಯಯನಗಳೂ ಕಡಿಮೆ. ಹೀಗಾಗಿ ನಿಶ್ಚಿತವಾದ ಔಷಧಿ ಇಲ್ಲ. ಹೀಗಾಗಿ, ನಾನೀಗ ವೈದ್ಯಲೋಕಕ್ಕೆ ಟ್ರಯಲ್ ಆ್ಯಂಡ್ ಎರರ್ ಆಟದ ವಸ್ತು.

ಅಸಲಿಗೆ ನಾನೊಂದು ಭಿನ್ನ ಆಟದಲ್ಲಿದ್ದೆ... ವೇಗವಾಗಿ ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದೆ. ಕನಸುಗಳು, ಯೋಜನೆಗಳು, ಆಕಾಂಕ್ಷೆಗಳು, ಗುರಿಗಳು ಈ ಎಲ್ಲವೂಗಳಲ್ಲಿ ನಾನು ಎಂಗೇಜ್​ ಆಗಿದ್ದೆ. ಥಟ್ಟನೆ ಯಾರೋ ಭಜ ತಟ್ಟಿದ ಹಾಗಾಯ್ತು. ತಿರುಗಿ ನೋಡಿದರೆ ಟಿಸಿ ನಿಂತಿದ್ದರು. ‘‘ನೀವು ತಲುಪಬೇಕಾದ ಸ್ಥಳ ಬಂದಿದೆ.. ಪ್ಲೀಸ್​ ಇಳಿದು ಬಿಡಿ..’’ ಅಂದಾಗ ನನಗೆ ಗೊಂದಲ: ಇಲ್ಲ.. ಇಲ್ಲ.. ನಾನು ತಲುಪಬೇಕಾದ ಸ್ಥಳ ಇನ್ನೂ ಬಂದಿಲ್ಲ' ಎಂದೆ. ‘‘ಇಲ್ಲ, ಅದೇ ಇದು.. ಕೆಲಮೊಮ್ಮೆ ಹಾಗೆಯೇ ಆಗುತ್ತೆ.

ನನಗೆ ಈಗ ಅರ್ಥವಾಗಿದ್ದು ಇಷ್ಟೇ; ಸಾಗರದಲ್ಲಿ ತೇಲುತ್ತಿರುವ ಮರದ ತೊಗಟೆಯಂತಿರುವ ನಿಮಗೆ ಅಲ್ಲಿನ ಅಲೆಗಳು ಹೇಗಿರಬಹುದೆಂದು ಊಹಿಸಲು ಅಸಾಧ್ಯವಾಗುತ್ತದೆ ಹಾಗೂ ಅವುಗಳನ್ನು ನಿಯಂತ್ರಿಸಲು ನೀವು ಹತಾಶರಾಗಿ ಪ್ರಯತ್ನಿಸುತ್ತೀರಿ. ಇಂಥದೊಂದು ಗಾಬರಿ, ಆತಂಕ, ಭಯ ಪರಿಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ನಾನು, ನನ್ನ ಮಗನ ಬಳಿ ಹೇಳಿಕೊಂಡೆ: ‘‘ನನ್ನಿಂದ ನಾನು ನಿರೀಕ್ಷಿಸುವುದು ಇಷ್ಟೇ. ಈ ಪರಿಸ್ಥಿತಿಯನ್ನು ಮತ್ತೆ ಎಂದಿಗೂ ನಾನು ಎದುರಿಸಬಾರದು. ನನ್ನ ಕಾಲ ಮೇಲೆ ನಾನು ನಿಲ್ಲಬೇಕಿದೆ. ಭೀತಿ ಮತ್ತು ಭಯ ನನ್ನ ಆಕ್ರಮಿಸಿಕೊಳ್ಳಬಾರದು’’.”

ನೋವಿನ ಅರಿವು ನಿಮಗೆ ತಿಳಿದಿದ್ದರೆ, ನನ್ನ ಈಗಿನ ಸ್ವರೂಪ ಮತ್ತು ತೀವ್ರತೆಯ ಅನುಭವ ನಿಮಗೂ ಇರುತ್ತದೆ. ಯಾವುದೇ ಸಮಾಧಾನ, ಪ್ರೇರಣೆ ಕೆಲಸ ಮಾಡುತ್ತಿಲ್ಲ. ಬರೀ ನೋವು, ಮತ್ತು ಈ ನೋವು ದೇವರಿಗಿಂತಲೂ ಅಗಾಧವಾದದ್ದು ಅನಿಸುತ್ತಿದೆ.”

ದುಗುಡ, ದಣಿವಿನಿಂದ ಲಂಡನ್ ಆಸ್ಪತ್ರೆ ಪ್ರವೇಶಿಸಿದಾಗ ಆಸ್ಪತ್ರೆಯ ಮುಂಭಾಗದಲ್ಲಿ ಲಾರ್ಡ್ಸ್ ಸ್ಟೇಡಿಯಂ ಇರೋದು ಅರಿವಾಯ್ತು. ಇದು ನನ್ನ ಬಾಲ್ಯದ ಕನಸಿನ ಮೆಕ್ಕಾ. ನೋವಿನ ಮಧ್ಯೆಯೂ ನಾನು ಅಲ್ಲಿ ನಗುತ್ತಿರುವ ವಿವಿಯನ್‌ ರಿಚರ್ಡ್ಸ್ ಅವರ ಪೋಸ್ಟರ್‌ ಕಂಡೆ. ನಾನು ಈ ಜಗತ್ತಿನಲ್ಲಿ ಇಲ್ಲದಿದ್ದರೂ ಈ ಪ್ರಪಂಚದಲ್ಲಿ ಏನೂ ಸಂಭವಿಸುವುದಿಲ್ಲ. ಎಲ್ಲವೂ ಹಾಗೆಯೇ ಇರುತ್ತದೆ. 

ನನ್ನ ಕೊಠಡಿಯ ಬಲಭಾಗದಲ್ಲಿ ಕೋಮಾದಲ್ಲಿ ಇರುವವರ ವಾರ್ಡ್ ಇದೆ. ಒಂದೊಮ್ಮೆ ನಾನು ಆಸ್ಪತ್ರೆಯ ಬಾಲ್ಕನಿಯಲ್ಲಿ ನಿಂತು ದೂರಕ್ಕೆ ದೃಷ್ಟಿ ಹರಿಸಿದೆ. ತಕ್ಷಣ ವಿಲಕ್ಷಣವಾದ ಭಾವವೊಂದು ನನ್ನನ್ನು ಕಾಡಿತು. ಜೀವನ ಆಟ ಮತ್ತು ಸಾವಿನ ಆಟದ ನಡುವೆ ಒಂದು ಕೇವಲ ಒಂದು ರಸ್ತೆ ಮಾತ್ರ ಅಲ್ಲಿತ್ತು. ಒಂದು ಕಡೆ ಕ್ರೀಡಾಂಗಣ... ಮತ್ತೊಂದು ಕಡೆ ಆಸ್ಪತ್ರೆ ಇತ್ತು. ಆದರೆ ನಾವು ಇವೆರಡರಲ್ಲಿ ಒಂದರ ಭಾಗವಾಗಿದ್ದೇವೆ ಎಂದು ನಿಶ್ಚಿತವಾಗಿ ಹೇಳಲು ಸಾಧ್ಯವಿಲ್ಲ. ಕ್ರೀಡಾಂಗಣಕ್ಕೂ ಸೇರಿದವರಲ್ಲ, ಆಸ್ಪತ್ರೆಗೂ ಸೇರಿದವರಲ್ಲ. ಈ ಸತ್ಯ ನನ್ನನ್ನು ಬಹಳವಾಗಿ ಕಾಡಿತು.

ಈ ಬ್ರಹ್ಮಾಂಡಕ್ಕೆ ಅದೆಂಥಾ ಅಭೂತ ಪೂರ್ವ ಶಕ್ತಿ ಇದೆ ಎಂಬುದು ಗೊತ್ತಾಯಿತು. ನನ್ನ ಆಸ್ಪತ್ರೆ ಇರುವ ಸ್ಥಳದ ಈ ಒಂದು ವಿಚಿತ್ರ ಘಟ್ಟ ನನ್ನನ್ನು ಬಹುವಾಗಿ ಕಾಡಿತು. ನನ್ನಲ್ಲೀಗ ಅನಿಶ್ಚಿತತೆ ಮನೆ ಮಾಡಿದೆ. ನಾನೀಗ ಮಾಡಲು ಸಾಧ್ಯವಿರುವುದು ಒಂದನ್ನೇ.. ನನ್ನ ಸಾಮರ್ಥ್ಯವನ್ನು ಅರಿತುಕೊಂಡು, ನನ್ನ ಪಾಲಿನ ಆಟವನ್ನು ಅತ್ಯುತ್ತಮವಾಗಿ ಆಡೋದು."
"ಫಲಿತಾಂಶ ಏನಾಗಬಹುದೆಂದು ಯೋಚಿಸಿದೆ, ಇದು ನನ್ನನ್ನು ಎಲ್ಲಿಗೆ ಕರೆದುಕೊಂಡು ಹೋಗಬಹುದೆಂದೂ ಯೋಚಿಸಿದೆ. ಈಗಿನಿಂದ ನಾಲ್ಕು ಎಂಟು ತಿಂಗಳು ಅಥವಾ ಎರಡು ವರ್ಷವಾಗಲಿ, ಫಲಿತಾಂಶ ಏನೇ ಬರಲಿ. ನಾನು ನಂಬಿಕೆ ಕಳೆದುಕೊಳ್ಳಬಾರದು ಎಂದು ನಿರ್ಧರಿಸಿದ್ದೇನೆ."

"ಆಸ್ಪತ್ರೆಯ ಚಿಕಿತ್ಸೆ ಪಡೆಯುವಾಗ ಮೊದಲ ಬಾರಿಗೆ ಸ್ವಾತಂತ್ರ್ಯ ಎನ್ನುವ ಪದದ ನಿಜವಾದ ಅರ್ಥ ಮನವರಿಕೆಯಾಗಿದೆ. ಜೀವನದ ಮ್ಯಾಜಿಕನ್ನು ಮೊದಲ ಬಾರಿಗೆ ಪರೀಕ್ಷಿಸುತ್ತಿದ್ದೇನೆ. ಫಲಿತಾಂಶ ಏನಾಗಲಿದೆ ಎಂಬುದನ್ನು ಕಾಯುತ್ತಿದ್ದೇನೆ. ನನ್ನ ಪ್ರತಿಯೊಂದು ಕಣಕಣದಲ್ಲೂ ವಿಶ್ವಾಸವಿದೆ. ಅದು ಉಳಿಯುವುದೇ ಎನ್ನುವುದನ್ನು ಸಮಯವೇ ಹೇಳಲಿದೆ. ”

"ನನ್ನ ಜೀವನದ ಪ್ರಯಾಣದುದ್ದಕ್ಕೂ ಜಗತ್ತಿನಾದ್ಯಂತ ಜನ ನನಗಾಗಿ ಪ್ರಾರ್ಥಿಸಿಸುತ್ತಿದ್ದಾರೆ... ಶುಭ ಕೋರಿದ್ದಾರೆ. ನನಗೆ ತಿಳಿದಿರುವ, ತಿಳಿಯದೆ ಇರುವ ಜನರು ವಿಶ್ವದ ವಿವಿಧೆಡೆಯಿಂದ ನನಗಾಗಿ ಪ್ರಾರ್ಥಿಸುತ್ತಿದ್ದಾರೆ. ಬೇರೆ ಬೇರೆ ಜಾಗದಲ್ಲಿ ಬೇರೆ ಬೇರೆ ಕಾಲಮಾನದಲ್ಲಿ ಮಾಡಿದ ಈ ಪ್ರಾರ್ಥನೆ ಒಂದಾಗಿ ನನಗೆ ಸ್ಫೂರ್ತಿ ನೀಡುತ್ತಿದೆ... ನನ್ನ ಶಕ್ತಿಯ ಕಿರೀಟವಾಗಿದೆ. ಈ ವಿಶ್ವಾಸ ನಿಧಾನವಾಗಿ ಮೊಗ್ಗಾಗಿ, ಎಲೆಯಾಗಿ, ರೆಂಬೆವಾಗಿ ಬೆಳೆಯುತ್ತಿದೆ. ನಾನು ಈ ಪ್ರಾರ್ಥನೆಯನ್ನು ನೋಡುತ್ತ ತೃಪ್ತಿಪಡುತ್ತಿದ್ದೇನೆ. ಪ್ರತಿ ಹೂವು, ಪ್ರತಿ ರೆಂಬೆಯೂ ಸಾಮೂಹಿಕ ಪ್ರಾರ್ಥನೆಯ ಮೂಲಕ ನನ್ನನ್ನು ತಲುಪಿ ಅಚ್ಚರಿ, ಸಂತೋಷ ಮತ್ತು ಕುತೂಹಲ ಮೂಡಿಸಿದೆ. ಒಂದು ಪ್ರವಾಹವನ್ನು ತಡೆಯಲು ಮುಚ್ಚಳದ ಅಗತ್ಯವಿಲ್ಲ ಎನ್ನುವುದು ಮನವರಿಕೆಯಾಗಿದೆ. ಬಹುಶಃ ಪ್ರಕೃತಿ ನನಗೆ ಸಣ್ಣ ಆಘಾತ ನೀಡಿದೆಯಷ್ಟೆ.
                                                                                                                                   -Vinutha Vishwanath

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
 ಜಾಹೀರಾತು
 ಜಾಹೀರಾತು
 ಜಾಹೀರಾತು

 ಸೇವಾ ಮಾಣಿಕ್ಯ  ದಿನೇಶ್ ಶೆಟ್ಟಿ ಮಾಳ-ಅಂಕಣ-Times of karkala

ಯುವ ಸಂಘಟನಾ ಚತುರ,ನೊಂದವರಿಗೆ,ಅಶಕ್ತರಿಗೆ,ದುರ್ಬಲರಿಗೆ,ಅಸಹಾಯಕರಿಗೆ,ನಿರಂತರ ಕಾಮದೇನುವಾಗಿರುವ ನಿಷ್ಕಲ್ಮಶ ಮನಸ್ಸಿನ ,ವಿಶಾಲ ಹೃದಯದ ಸೇವಾ ಮಾಣಿಕ್ಯ: ದಿನೇಶ್ ಶೆಟ್ಟಿ ಮಾಳ {ದುಬೈ}

ಪೊರ್ತು ಸೇವಾ ಚಾರಿಟೇಬಲ್ ಟ್ರಸ್ಟ್ ಎನ್ನುವ ಸಂಸ್ಥೆಯನ್ನು ಕಟ್ಟಿ ಅನೇಕ ನಿಸ್ವಾರ್ಥ ಸೇವಾ ದಾತರನ್ನು ಒಟ್ಟು ಸೇರಿಸಿ ತೆರೆಮರೆಯಲ್ಲಿ ಸದಾ ಸೇವೆ ಸಲ್ಲಿಸುತ್ತಿರುವ ಸೇವಾ ಸರದಾರ.

ದೂರದ ಕರ್ಮಭೂಮಿ ದುಬೈ ದೇಶದಲ್ಲಿ ದುಡಿಯುತ್ತಾ ಸದಾ ತಾಯ್ನಾಡಿನ ಅಶಕ್ತರ ಪಾಲಿಗೆ ಮಿಡಿಯುತ್ತಾ,ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎನ್ನುವ ತತ್ವ ದಾರಿಯಲ್ಲಿ ಅನೇಕ ಸೇವಾ ಸಂಸ್ಥೆಗಳಲ್ಲಿ ತನ್ನ ದುಡಿಮೆಯ ಒಂದು ಪಾಲನ್ನು ಅಶಕ್ತರ ಪಾಲಿಗೆ ನೀಡಿ ಸುಖ ನೆಮ್ಮದಿಯ ಯನ್ನು ಪಡೆಯುವ  ಪುಣ್ಯವಂತರು ನೀವು.

ಜೇಬು ತುಂಬಿದವನು ಶ್ರೀಮಂತನಲ್ಲ,ಹೃದಯ ತುಂಬಿದವನು ನಿಜವಾದ ಹೃದಯ ಶ್ರೀಮಂತಿಕೆಯ ವ್ಯಕ್ತಿತ್ವ ದಣಿ ವರಿಯದ ಹೃದಯ ವೈಶಾಲ್ಯತೆ ಯ ಹೃದಯ ಶ್ರೀಮಂತರು ನೀವು.ಕತ್ತಲೆಯಿಂದ ಬೆಳಕಿನೆಡೆ ಅಶಕ್ತರನ್ನು ತಂದಿರುವ ಕೀರ್ತಿ ನಿಮಗೆ ಸಲ್ಲುತ್ತದೆ.ಸೇವೆ ಎಂಬ ಜ್ಯೋತಿ ನಿಮ್ಮಿ ಮುಂದಾಳುತ್ವ ದಲ್ಲಿ ಸದಾ ಬೆಳಗುತ್ತಿರಲಿ .
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
 ಜಾಹೀರಾತು
 ಜಾಹೀರಾತು
 ಜಾಹೀರಾತು

ವಿನಯ್‌ ಕುಮಾರ್‌ ಸೊರಕೆ ನೇತೃತ್ವದಲ್ಲಿ 15 ಟನ್‌ ಅಕ್ಕಿ ಹಾಗೂ ದಿನಸಿ ವಸ್ತುಗಳನ್ನು ವಿತರಿಸಿದ ಕಾಪು ಕಾಂಗ್ರೆಸ್‌-Times Of karkala

ಕಾಪು ವಿಧಾನಸಭಾ ಕ್ಷೇತ್ರದ ಜನಪ್ರಿಯ ನಾಯಕ, ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ  ವಿನಯ್ ಕುಮಾರ್ ಸೊರಕೆಯವರ ನೇತೃತ್ವದಲ್ಲಿ,  ಕೋವಿಡ್-19 ಮಹಾಮಾರಿಯ ಸಲುವಾಗಿ  ಸುಮಾರು 15 ಟನ್ ಕುಚ್ಚಲಕ್ಕಿ ಮತ್ತು ಇನ್ನಿತರ ದಿನನಿತ್ಯದ ವಸ್ತುಗಳನ್ನು ಪಕ್ಷದ ಮುಖಂಡರೊಂದಿಗೆ ಸೇರಿ ವಿತರಿಸಿದರು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
 ಜಾಹೀರಾತು
 ಜಾಹೀರಾತು
 ಜಾಹೀರಾತು

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget