ಕಾರ್ಮಿಕರ ಮಗಳ ಹುಟ್ಟುಹಬ್ಬ ಆಚರಿಸಿದ ಪೊಲೀಸರು

ಪೊಲೀಸರ ಪುಟ್ಟ ಸಹಾಯದಿಂದ ಶನಿವಾರ ಕೂಲಿ ಕಾರ್ಮಿಕರ ನಾಲ್ಕು ವರ್ಷದ ಬಾಲಕಿಯೊಬ್ಬಳು ತನ್ನ ಜನ್ಮದಿನವನ್ನು ಆಚರಿಸಿಕೊಳ್ಳಲು ಸಾಧ್ಯವಾಯಿತು. 
ಫತೇಪುರಿ ಬೇರಿಯ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ತಮ್ಮದೆ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಫೋಟೋದಲ್ಲಿ ಬಾಲಕಿ ತನ್ನ ಮುಂದೆ ಕೇಕ್‍ನೊಂದಿಗೆ ಬರ್ತ್ ಡೇ ಟೋಪಿ ಧರಿಸಿರುವುದನ್ನು ಕಾಣಬಹುದು. ಬಾಲಕಿ ಕೇಕ್ ಕತ್ತರಿಸಿ ಖುಷಿ ವ್ಯಕ್ತಪಡಿಸಿದ್ದಾಳೆ.
ಬಾಲಕಿಯ ಈ ವರ್ಷದ ಬರ್ತ್ ಡೇ ಅತ್ಯಂತ ಸ್ಮರಣಿಯವಾಗಿತ್ತದೆ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಬಾಲಕಿ ಚಂದನ್ ಹುಲ್ಲಾ ಗ್ರಾಮದ ನಿವಾಸಿ ಎಂಬ ಮಾಹಿತಿಯನ್ನು ದೆಹಲಿ ಪೊಲೀಸರು ನೀಡಿದ್ದಾರೆ.
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget