ಕಾರ್ಕಳ : ಕೊರೊನಾದಿಂದ ಸಂಕಷ್ಟದಲ್ಲಿರುವ ಭಾರತದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಮೋದಿಯವರು ಪ್ರಕಟಿಸಿದ ರೂ. ೨೦ ಲಕ್ಷ ಕೋಟಿ ಆರ್ಥಿಕ ಬೆಂಬಲದ ಮೂಲಕ ಭವ್ಯ ಭಾರತ ನಿರ್ಮಾಣ ಸಾಧ್ಯವೆಂದು ಕಾರ್ಕಳ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಮಹಾವೀರ ಹೆಗ್ಡೆ ತಿಳಿಸಿದ್ದಾರೆ.
ಲಾಕ್ಡೌನ್ ಬಳಿಕ ಸುಮಾರು ೫೦ ದಿನಗಳಿಂದ ದೇಶದ ಜನತೆ ಸಂಕಷ್ಟದಲ್ಲಿರುವುದನ್ನು ಅರಿತ ಪ್ರಧಾನಿ ನರೇಂದ್ರ ಮೋದಿಯವರು ರೂ. ೨೦ ಲಕ್ಷ ಕೋಟಿಯ ವಿಶೇಷ ಪ್ಯಾಕೇಜ್ನಿಂದಾಗಿ ಸಂಕಷ್ಟದಲ್ಲಿರುವ ಜನತೆಗೆ ಆತ್ಮ ವಿಶ್ವಾಸ ಹೆಚ್ಚಿಸುವ ಜೊತೆಗೆ ಸ್ವಾವಲಂಭಿ ಭಾರತ ನಿರ್ಮಾಣಕ್ಕೆ ಪ್ರಧಾನಿ ಬಾಜನರಾಗಿದ್ದಾರೆ.
ಸ್ವದೇಶಿ ಚಿಂತನೆಯ ೨೦ ಲಕ್ಷ ಕೋಟಿ ರೂ. ಆರ್ಥಿಕ ಬೆಂಬಲದಿOದ ಭವ್ಯ ಭಾರತ ನಿರ್ಮಾಣ ಯೋಜನೆಗಳಿಂದ ದೇಶದಲ್ಲಿ ಸ್ವದೇಶಿ ಉದ್ಯಮದ ನಿರ್ಮಾಣ, ಉದ್ಯೋಗ ಸೃಷ್ಟಿ, ಸಣ್ಣ ಹಾಗೂ ಮದ್ಯಮ ಕೈಗಾರಿಕೆಗಳಿಗೆ ಸಹಾಯ, ರಿಯಲ್ ಎಸ್ಟೇಟ್ ಉತ್ತೇಜನಕ್ಕೆ ಒತ್ತು, ಕಟ್ಟಡ ಕಾಮಗಾರಿಗೆ ವಿಶೇಷ ಪ್ರೋತ್ಸಾಹ, ವಿಶೇದಲ್ಲಿರುವ ಅನಿವಾಸಿ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ಪ್ರಯತ್ನ ಹೀಗೆ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಕೊರೊನಾದಂತಹ ಕಠಿಣ ಪರಿಸ್ಥಿತಿಯಲ್ಲಿ ಜನರ ಕಷ್ಠ ಪರಿಹಾರ ಮಾಡಿಕೊಡುವ ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನ ಇಡೀ ದೇಶದ ಜನತೆ ಮಾನ್ಯ ಪ್ರಧಾನಿಯವರ ಮೇಲೆ ಇನ್ನೂ ಪರಿಪೂರ್ಣ ನಂಬಿಕೆ ಇಡುವಂತೆ ಮಾಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
Post a comment