ಕಾರ್ಕಳ:ಮಾಳದಲ್ಲಿ ಡೆಂಗ್ಯೂ ಪ್ರಕರಣಗಳು!
ಕಾರ್ಕಳ:ಕೊರೋನಾ ಮಹಾಮಾರಿಯ ಅಟ್ಟಹಾಸ ಒಂದೆಡೆಯಾದರೆ ಇನ್ನೊಂದೆಡೆ ಕಾರ್ಕಳ ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣಗಳು ಅಲ್ಲಲ್ಲಿ ಕಂಡು ಬರುತ್ತಿದೆ. ತಾಲೂಕಿನ ಮಾಳ ಗ್ರಾಮದಲ್ಲಿ ಈಗಾಗಲೇ ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದು ಜನರನ್ನು ಆತಂಕಕ್ಕೆ ದೂಡಿದೆ.
ಮಳೆಗಾಲದ ಆರಂಭದಲ್ಲಿಯೇ 13 ಡೆಂಗ್ಯೂ ಪ್ರಕರಣಗಳು ಕಂಡುಬಂದಿದೆ. ಮಾಳ ಇಂದಿರಾನಗರ ಮಲ್ಲಾರು ಪರಿಸರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಿರಂತರ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿದೆ. ಮನೆಯ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳುವುದೇ ಮಲೇರಿಯಾ ಡೆಂಗ್ಯೂ ಮುಂತಾದ ಕಾಯಿಲೆಗಳನ್ನು ತಡೆಗಟ್ಟುವ ಪ್ರಮುಖ ಹಾದಿಯಾಗಿದೆ.
ಮಾಳ ಪರಿಸರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಡೆಂಗ್ಯೂ ಪ್ರಕರಣಗಳು ಗೋಚರಿಸುತ್ತಿದ್ದು,ರಬ್ಬರ್ ತೋಟಗಳಲ್ಲಿ ಈಡಿಸ್ ಸೊಳ್ಳೆಗಳು ಹೆಚ್ಚಾಗಿ ಕಂಡು ಬರುತ್ತಿದೆ. ಅದರಿಂದ ಇಂತಹ ಪ್ರದೇಶಗಳಲ್ಲಿ ಫಾಗಿಂಗ್ ಮಾಡಲಾಗುತ್ತಿದ್ದು, ತೋಟದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ಪೂರ್ಣ ಪ್ರಮಾಣದ ಬಟ್ಟೆಗಳನ್ನು ಧರಿಸಬೇಕು ಎಂದು ಆರೋಗ್ಯಾಧಿಕಾರಿಗಳು ಎಚ್ಚರಿಸಿದ್ದಾರೆ.
Post a comment