"ನೀರು ಪೂರೈಕೆಯ ನೆಪದಲ್ಲಿ ಅಕ್ರಮ ಮರಳುಗಾರಿಕೆ"- ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಡಿಕೆ ಶಿವಕುಮಾರ್ ಗೆ ಮನವಿ
ಉಡುಪಿ: ಸ್ವರ್ಣ ನದಿಯಲ್ಲಿ ಉಡುಪಿ ನಗರಕ್ಕೆ ನೀರು ಪೂರೈಸುವ ನೆಪದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ವಿಶ್ವಾಸ್ ವಿ ಅಮೀನ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮನವಿ ಸಲ್ಲಿಸಿದರು.
ಉಡುಪಿ ಯಾ ಸ್ವರ್ಣ ನದಿಯಲ್ಲಿ ನಗರಕ್ಕೆ ನೀರು ಪೂರೈಸುವ ನೆಪದಲ್ಲಿ ಹೂಳೆತ್ತುವ ಕಾಮಗಾರಿಯಲ್ಲಿ ಭಾರೀ ದೊಡ್ಡ ಅಕ್ರಮ ನಡೆದಿದೆ, ಈ ಕಳ್ಳ ಸಾಗಾಣಿಕೆಯ ತನಿಖೆ ನಡೆಸುವಂತೆ ಸರಕಾರಕ್ಕೆ ಒತ್ತಡ ತರಬೇಕೆಂದು ಹಾಗೂ ಹಗರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ಜನಪ್ರತಿನಿದಿಗಳು ಮತ್ತು ರಾಜಕಾರಣಿಗಳಿಗೆ ಶಿಕ್ಷೆ ಆಗಬೇಕೆಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ವಿ. ಅಮೀನ್ ರವರು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಂಯೋಜಕರಾದ ಯೋಗೀಶ್ ನಯನ್ ಇನ್ನ ರವರು ಉಪಸ್ಥಿತರಿದ್ದರು.
Post a comment