ಉಡುಪಿ:ಸೋಂಕು ಹರಡಲು ಮಹಾರಾಷ್ಟ್ರದವರೇ ಕಾರಣ: ಬಸವರಾಜ್ ಬೊಮ್ಮಾಯಿ-Times of karkala

ಉಡುಪಿ ಜಿಲ್ಲೆ:ಸೋಂಕು ಹರಡಲು ಮಹಾರಾಷ್ಟ್ರದವರೇ ಕಾರಣ: ಬಸವರಾಜ್ ಬೊಮ್ಮಾಯಿ-Times of karkala 
Times Of karkala whatsapp Group link:

ರಾಜ್ಯದಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳಿರುವ ಉಡುಪಿ ಜಿಲ್ಲೆ ಸೇರಿದಂತೆ 6 ಪ್ರಮುಖ ಜಿಲ್ಲೆಗಳಲ್ಲಿ ಸೋಂಕು ಹರಡುವುದಕ್ಕೆ ಮಹಾರಾಷ್ಟ್ರದಿಂದ ಬಂದವರೇ ಪ್ರಮುಖ ಕಾರಣ ಎಂದು ರಾಜ್ಯ ಗೃಹ ಸಚಿವ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಸೋಮವಾರ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ಪರಿಸ್ಥಿತಿ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಮುಂಬೈಯಿಂದ ಬಂದವರಲ್ಲಿ ಕೆಲವು ಜಿಲ್ಲೆಗಳಲ್ಲಿ ಶೇ. 10ರಿಂದ ಇನ್ನು ಕೆಲವು ಜಿಲ್ಲೆಗಳಲ್ಲಿ ಶೇ. 20ರಷ್ಟುಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ ಎಂದು ಅವರು ಹೇಳಿದರು.


ಜಾಹೀರಾತು 


ತಾವು ಮುಂಬೈ ಕಮಿಷನರ್‌ ಅವರೊಂದಿಗೆ ಮಾತನಾಡಿದ್ದು, ಅವರು ಮುಂಬೈಯಲ್ಲಿ ಕೊರೋನಾ ಪರಿಸ್ಥಿತಿ ಬಗ್ಗೆ ಬಹಳ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲಿ ಈಗಾಗಲೇ ಅನಿಯಂತ್ರಿತವಾಗಿ ಕೊರೋನಾ ಹರಡಿ ಬಿಟ್ಟಿದೆ. ಖಾಸಗಿ ಆಸ್ಪತ್ರೆಗಳು ಇನ್ನೂ ತೆರೆದಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದಕ್ಕೆ ಸಾಧ್ಯವಾಗದಷ್ಟುಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದ್ದಾರೆ. ಆದ್ದರಿಂದ ಸಹಜವಾಗಿಯೇ ಮುಂಬೈಯಿಂದ ರಾಜ್ಯಕ್ಕೆ ಬಂದವರಿಂದ ರಾಜ್ಯದಲ್ಲಿ ಸೋಂಕು ಹರಡುತ್ತಿದೆ ಎಂದು ಗೃಹ ಸಚಿವರು ಹೇಳಿದರು. 

ಜಾಹೀರಾತು 
 https://wa.me/919945283600


ಹಾಗಂತ ಮುಂಬೈಯಿಂದ ಬರುವವರನ್ನು ನಾವು ತಡೆಯುವುದಕ್ಕಾಗುವುದಿಲ್ಲ. ಅವರೂ ನಮ್ಮವರೇ. ಈಗಾಗಲೇ ಸಾಕಷ್ಟುಮಂದಿ ನೇರವಾಗಿ ರೈಲುಗಳಲ್ಲಿ ನಮ್ಮ ರಾಜ್ಯಕ್ಕೆ ಬರಲಾರಂಭಿಸಿದ್ದಾರೆ. ಇನ್ನೂ ಸಾಕಷ್ಟುಮಂದಿ ಸೇವಾಸಿಂಧು  ಪೋರ್ಟಲ್‌ಗೆ ಅನುಮತಿಗಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅವರೆಲ್ಲರಿಗೂ ಅನುಮತಿ ನೀಡಲಾಗುತ್ತದೆ. ಈ ಬಗ್ಗೆ ಆತಂಕ ಬೇಡ ಎಂದು ಉಸ್ತುವಾರಿ ಸಚಿವರು ಹೇಳಿದರು.

ಜಾಹೀರಾತು 


ಕಾರ್ಕಳ ಶಾಸಕ ಸುನಿಲ್‌ ಕುಮಾರ್‌, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ. ಜಗದೀಶ್‌, ಜಿ. ಪಂ. ಸಿಓಇ ಪ್ರೀತಿ ಗೆಹಲೋತ್‌ ಉಪಸ್ಥಿತರಿದ್ದರು.

ಜಾಹೀರಾತು 


ಜಾಹೀರಾತು 
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ  ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget