ಕಾರ್ಕಳ:ಕ್ವಾರಂಟೈನ್ ಕೇಂದ್ರದಲ್ಲಿ ಬರ್ತ್ಡೇ ವಿವಾದ:ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಖಂಡನೆ-Times of karkala

ಕಾರ್ಕಳ:ಕ್ವಾರಂಟೈನ್ ಕೇಂದ್ರದಲ್ಲಿ ಬರ್ತ್ಡೇ ವಿವಾದ:ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಖಂಡನೆ-Times of karkala 

Times Of karkala whatsapp Group link:

ಕಾರ್ಕಳ ಸಾಣೂರಿನ ಕ್ವಾರಂಟೈನ್ ಸೆಂಟರ್ ನಲ್ಲಿ ಬಿಜೆಪಿಯವರು ಆಚರಿಸಿದ ಬರ್ತ್ಡೇ ಪಾರ್ಟಿ ಇದೀಗ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಘಟನೆಯ ಕುರಿತು ಖಂಡನೆ ವ್ಯಕ್ತಪಡಿಸಿದ್ದಾರೆ. 


ಮುರತ್ತಂಗಡಿಯ ಪ್ರಕೃತಿ ಕ್ವಾರಂಟೈನ್ ಸೆಂಟರ್ ನಲ್ಲಿ ಬಿಜೆಯಿಯ ,ಸ್ಥಳೀಯ ಪಂಚಾಯತ್ ಅಧ್ಯಕ್ಷರು ಹಾಗೂ ಯುವ ಮೋರ್ಚಾದ ಕಾರ್ಯಕರ್ತರು ಸೇರಿಕೊಂಡು ಹುಟ್ಟು ಹಬ್ಬ ಸಂಭ್ರಮಾಚರಣೆ ಮಾಡಿದ್ದಾರೆ. ಜಾಹೀರಾತು 
 https://wa.me/919945283600

ಮುಂಬೈನಿಂದ ಬಂದವರ ಜೊತೆ ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮೋಜು ಮಸ್ತಿಯನ್ನು ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಹಾಗೂ ಕಾರ್ಕಳ ತಾಲೂಕಿನಲ್ಲಿ ಬಹಳಷ್ಟು ಕೊರೋನಾ ಭೀತಿ ಇರುವ ಸಂಧರ್ಭದಲ್ಲಿ  ಮನೆಗೆ ಹೋದರೂ  ಪಾಸಿಟಿವ್ ಬರುತ್ತಿರುವ ಈ ಸಂಧರ್ಭದಲ್ಲಿ ಈ ರೀತಿಯ  ಬೇಜವಾಬ್ದಾರಿಯ ಕೆಲಸವನ್ನು ಕಾರ್ಕಳದ ಆಡಳಿತ ಪಕ್ಷದ ಕಾರ್ಯಕರ್ತರು ಮಾಡಿರುವುದು ಬಹಳಷ್ಟು ಬೇಸರದ ಸಂಗತಿ.

ಜಾಹೀರಾತು 


ಈ ಬಗ್ಗೆ ತನಿಖೆ ಆಗಬೇಕು ತಪ್ಪಿತಸ್ಥರಿಗೆ ಶಿಕ್ಷೆ ಅಗಬೇಕು. ಕಾರ್ಕಳ ಭಾಗದ ಕ್ವಾರಂಟೈನ್ ಕೇಂದ್ರಗಳು ಬಿಜೆಪಿಯ ಪ್ರಚಾರ ಕೇಂದ್ರಗಳಾಗಿವೆ ಎಂಬ ದೂರು ಬರುತ್ತಿರುವ ಹಿನ್ನಲೆಯಲ್ಲಿ ಈ ರೀತಿಯ ನೈತಿಕತೆ ಇಲ್ಲದ ಕೆಲಸ ಮಾಡುತ್ತಿರುವುದು ತಪ್ಪು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ಜಾಹೀರಾತು 

ಜಾಹೀರಾತು
 ಜಾಹೀರಾತು
 ಜಾಹೀರಾತು


Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget