ಕಾರ್ಕಳ ಬ್ಲಾಕ್ ಕಾಂಗ್ರೆಸ್:ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ-Times of karkala
ಕಾರ್ಕಳ: ಪಕ್ಷದ ಕಛೇರಿಯಲ್ಲಿ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸನ್ಮಾನ ಸಮಾರಂಭದ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್. ಶೇಖರ್ ಮಡಿವಾಳ ವಹಿಸಿ, ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಶುಭ ಹಾರೈಸಿದರುಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಬ್ಲಾಕ್ ಕಾಂಗ್ರೆಸ್ ಸೇವಾದಳ ಘಟಕದ ಅಧ್ಯಕ್ಷ ಸುಶಾಂತ್ ಸುಧಾಕರ್ ಕಾರ್ಯಕ್ರಮ ನಿರ್ವಹಿಸಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕ್ಯಾಸ್ಟಲಿನೋ ಧನ್ಯವಾದವಿತ್ತರು.
ಸಮಾರಂಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಧಾಕರ್ ಕೋಟ್ಯಾನ್, ಕೆಪಿಸಿಸಿ ಕಿಸಾನ್ ಘಟಕದ ಉದಯ ವಿ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಘಟಕ ಉಪಾಧ್ಯಕ್ಷ ಆರಿಫ್ ಕಲ್ಲೊಟ್ಟೆ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಗಳಾದ ಪ್ರಭಾಕರ ಬಂಗೇರಾ, ಸದಾಶಿವ ದೇವಾಡಿಗ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ನವೀನ್ ದೇವಾಡಿಗ, ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ನಗರ ಕಾಂಗ್ರೆಸ್ ಅಧ್ಯಕ್ಷ ಮಧುರಾಜ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಳಿನಿ ಆಚಾರ್ಯ, ಮಾಜಿ ಪುರಸಭಾ ಸದಸ್ಯ ಸುಬಿತ್ ಕುಮಾರ್ ಎನ್. ದಯಾನಂದ ಶೆಟ್ಟಿ, ಮಾಜಿ ಪುರಸಭಾ ಸದಸ್ಯ ಹರ್ಮನ್ ಕ್ಯಾಸ್ಟಲಿನೊ, ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶೋಭ, ಬ್ಲಾಕ್ ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷ ಸತೀಶ್ ಕಾರ್ಕಳ ಸಮಾರಂಭದಲ್ಲಿ ಉಪಸ್ಥಿತರಿದ್ದರು.




Post a comment