ಕಾರ್ಕಳ:ಎದೆಹಾಲು ಗಂಟಲಲ್ಲಿ ಸಿಲುಕಿ ಮಗು ಸಾವು-Times of karkala

ಕಾರ್ಕಳ:ಎದೆಹಾಲು ಗಂಟಲಲ್ಲಿ ಸಿಲುಕಿ ಮಗು ಸಾವು-Times of karkala 

ಕಾರ್ಕಳ ತಾಲೂಕಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದ 10 ತಿಂಗಳ ಮಗುವಿನ ವೈದ್ಯಕೀಯ ವರದಿ ಜಿಲ್ಲಾ ಆರೋಗ್ಯಾಧಿಕಾರಿಗಳ ಕೈಸೇರಿದೆ.


ಜ್ವರ ಮತ್ತು ಉಸಿರಾಟ ತೊಂದರೆಯಾಗಿ ಸಾವನ್ನಪ್ಪಲು ಎದೆಹಾಲು ಕಾರಣ ಅಂತ ವೈದ್ಯರು ಹೇಳಿದ್ದಾರೆ. ಕಾರ್ಕಳದ ಮಿಯಾರು ಗ್ರಾಮದಲ್ಲಿ ನೆಲೆಸಿರುವ ಮೂಲತಃ ವಿಜಯಪುರ ಜಿಲ್ಲೆಯ ದಂಪತಿಯ ಮಗು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಏಪ್ರಿಲ್ ತಿಂಗಳಲ್ಲಿ ವಿಜಯಪುರಕ್ಕೆ ಹೋದ ದಂಪತಿ 10 ದಿನಗಳ ಹಿಂದೆ ವಾಪಸ್ ಆಗಿದ್ದರು. ಜೂನ್ 28 ರಂದು ಮಗುವಿಗೆ ಜ್ವರ ಕಾಣಿಸಿಕೊಂಡಿತ್ತು. ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ತಾಲೂಕು ಆಸ್ಪತ್ರೆಗೆ ಮಗುವನ್ನು ಕರೆ ತರುವಾಗ ಸಾವು ಸಂಭವಿಸಿದೆ.

ಕೊರೊನಾ ಸಂದರ್ಭದಲ್ಲಿ ಮೃತಪಟ್ಟಿರುವ ಕಾರಣ ಮಗುವಿನ ಗಂಟಲ ದ್ರವ ಪರೀಕ್ಷೆಗಾಗಿ ರವಾನಿಸಲಾಗಿತ್ತು. ಕೆಎಂಸಿ ಲ್ಯಾಬ್‍ನ ವರದಿ ಜಿಲ್ಲಾಡಳಿತದ ಕೈಸೇರಿದೆ. ತಾಯಿ 10 ತಿಂಗಳ ಮಗುವಿಗೆ ಮಲಗಿದಲ್ಲಿಗೆ ಎದೆಹಾಲು ಕೊಟ್ಟಿದ್ದರು. ಹಾಲು ಮಗುವಿನ ಶ್ವಾಸಕೋಶದಲ್ಲಿ ಸಿಕ್ಕಿಹಾಕಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಪುಟ್ಟ ಮಕ್ಕಳಿಗೆ ಮಲಗಿದಲ್ಲಿಗೆ ಎದೆಹಾಲು ಕೊಡಬಾರದು ಎಂದು ಸಲಹೆ ನೀಡಿದ್ದಾರೆ.

Times Of karkala whatsapp Group link:

ಜಾಹೀರಾತು

ಜಾಹೀರಾತು 
https://wa.me/919945283600

ಜಾಹೀರಾತು 
ಜಾಹೀರಾತು 

ಜಾಹೀರಾತು 

ಜಾಹೀರಾತು 




Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget