ಗುರುವಾರದಿಂದ ಒಂದು ವಾರ ದಕ್ಷಿಣ ಕನ್ನಡ ಜಿಲ್ಲೆ ಲಾಕ್‍ಡೌನ್-Times of karkala

ಗುರುವಾರದಿಂದ ಒಂದು ವಾರ ದಕ್ಷಿಣ ಕನ್ನಡ ಜಿಲ್ಲೆ ಲಾಕ್‍ಡೌನ್
 ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ ಅಮ್ಮಾಸ್ ಸ್ಪೋರ್ಟ್ಸ್ & ಗಿಫ್ಟ್ ಸೆಂಟರ್ ಕಾರ್ಕಳ-Times of karkala


ಗುರುವಾರದಿಂದ ಒಂದು ವಾರ ದಕ್ಷಿಣ ಕನ್ನಡ ಜಿಲ್ಲೆ ಲಾಕ್‍ಡೌನ್

ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಒಂದು ವಾರ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ.

ಗುರುವಾರದಿಂದ ಒಂದು ವಾರಗಳ ಕಾಲ ಲಾಕ್‍ಡೌನ್ ಘೋಷಣೆ ಮಾಡಿ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆದೇಶ ಹೊರಡಿಸಿದ್ದಾರೆ. ಬುಧವಾರದ ತನಕ ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ ಮಾಡಿಕೊಡಲಾಗಿದೆ. ನಂತರ ಬುಧವಾರ ರಾತ್ರಿ 8 ಗಂಟೆಯಿಂದಲೇ ಲಾಕ್‍ಡೌನ್ ಆರಂಭವಾಗಲಿದೆ.

ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ 11 ಜಿಲ್ಲೆಗಳ ಡಿಸಿಗಳು, ಸಿಇಒಗಳು ಮತ್ತು ಎಸ್‍ಪಿಗಳ ಜೊತೆ ಸಭೆ ಮಾಡುತ್ತಿದ್ದಾರೆ. ಈ ಸಭೆಯ ನಂತರ ಯಾವ ಜಿಲ್ಲೆಯಲ್ಲಿ ಲಾಕ್‍ಡೌನ್ ಜಾರಿ ಮಾಡಬೇಕು ಎಂಬುದನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ಆದರೆ ಸಿಎಂ ಘೋಷಣೆ ಮಾಡುವ ಮೊದಲೇ ಶ್ರೀನಿವಾಸ ಪೂಜಾರಿ ಒಂದು ವಾರಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‍ಡೌನ್ ಘೋಷಣೆ ಮಾಡಿದ್ದಾರೆ.

ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಲಾಕ್‍ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿಗಳಿಗೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮನವಿ ಮಾಡಿದ್ದರು. ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್‌ನಲ್ಲಿ ನಳಿನ್ ಮನವಿ ಮಾಡಿದ್ದರು. ಆಗ ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಯಡಿಯೂರಪ್ಪ ಸೂಚಿಸಿದ್ದರು. ಅದರಂತೆಯೇ ಒಂದು ವಾರಗಳ ಕಾಲ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ.

ವಿಡಿಯೋ ಕಾನ್ಫರೆನ್ಸ್‌ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪೂಜಾರಿ, ಜಿ.ಪಂ ಸಿ.ಇ.ಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.
https://wa.me/919945283600Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget