ಆಶಾ ಕಾರ್ಯಕರ್ತರಿಗೆ ಗೌರವ ಧನವನ್ನು ಹೆಚ್ಚಿಸಲು ಸೂಕ್ತ ಆರೋಗ್ಯ ವ್ಯವಸ್ಥೆಯನ್ನು ಒದಗಿಸಲು ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಮನವಿ-Times of karkala


 ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ ಅಮ್ಮಾಸ್ ಸ್ಪೋರ್ಟ್ಸ್ & ಗಿಫ್ಟ್ ಸೆಂಟರ್ ಕಾರ್ಕಳ-Times of karkala



ಆಶಾ ಕಾರ್ಯಕರ್ತರಿಗೆ ಗೌರವ ಧನವನ್ನು ಹೆಚ್ಚಿಸಲು  ಸೂಕ್ತ ಆರೋಗ್ಯ ವ್ಯವಸ್ಥೆಯನ್ನು ಒದಗಿಸಲು ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಮನವಿ-Times of karkala 

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯು ಹಮ್ಮಿಕೊಂಡಿದ್ದ ಅಭಿಯಾನದಲ್ಲಿ ಇಂದು ಆಶಾ ಕಾರ್ಯಕರ್ತೆಯರಿಗೆ ಗೌರವಧನವನ್ನು ಹೆಚ್ಚಿಸಬೇಕು,ಅವರಿಗೆ ಸೂಕ್ತ ಆರೋಗ್ಯ ವ್ಯವಸ್ಥೆಯನ್ನು ಒದಗಿಸಬೇಕು ಎಂದು ಒತ್ತಾಯಿಸಿ ಮನವಿಯೊಂದನ್ನು ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ, ರಾಷ್ಟ್ರಪತಿಗಳು ಹಾಗೂ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪ ಅವರಿಗೆ  ಸಲ್ಲಿಸಲಾಯಿತು.

ಜಿಲ್ಲಾಧ್ಯಕ್ಷರ ಅನುಪಸ್ಥಿತಿಯಲ್ಲಿ ಮಾಜಿ ಅಧ್ಯಕ್ಷರೂ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವೆರೋನಿಕಾ ಕರ್ನೇಲಿಯೋ ಅವರ ಮುಂದಾಳತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಚಂದ್ರಿಕಾ ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೋಪಿ.ಕೆ.ನಾಯ್ಕ್,ಆರ್ ಜಿ ಪಿ ಆರ್ ಎಸ್  ಜಿಲ್ಲಾ ಸಂಯೋಜಕಿ ರೋಶನಿ ಒಲಿವರ್, ತಾಲೂಕು ಪಂಚಾಯತ್ ಸದಸ್ಯೆ ಡಾ.ಸುನೀತಾ ಶೆಟ್ಟಿ, ಜಿಲ್ಲಾ,ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಶ್ರೀಮತಿ ಜ್ಯೋತಿ ಹೆಬ್ಬಾರ್,ಐರಿನ್ ಡಿ'ಸೋಜ,ಶಾಂತಿ ಪಿರೇರಾ,ಜ್ಯೋತಿ ಬರೆಟ್ಟೊ,ಪ್ರಮೀಳಾ ಜತ್ತನ್ನ, ರೋಜಲಿನ್ ಕ್ರಾಸ್ತಾ,ಮರೀನಾ ಜಾನ್, ಫೌಝಿಯಾ ಸಾದಿಕ್ ಮುಂತಾದವರು ಉಪಸ್ಥಿತರಿದ್ದರು.



https://wa.me/919945283600




Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget