ಉತ್ತರ ಪ್ರದೇಶದಲ್ಲಿ 18 ವರ್ಷದ ಯುವತಿಯ ಕತ್ತು ಕೊಯ್ದು ಕೊಲೆ:ಅತ್ಯಾಚಾರ ನಡೆದಿರುವ ಶಂಕೆ
ಲಕ್ನೋ: ಉತ್ತರ ಪ್ರದೇಶದಲ್ಲಿ ಮತ್ತೊಂದು ಅಪರಾಧ ಪ್ರಕರಣ ಬೆಳಕಿಗೆ ಬಂದಿದೆ. 18 ವರ್ಷದ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಲಖಿಮಪುರದಲ್ಲಿ ನಡೆದಿದೆ. ಯುವತಿಯ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮರಣೋತ್ತರ ವರದಿಗಾಗಿ ಕಾಯುತ್ತಿದ್ದಾರೆ.
ಯುವತಿ ಧವರಪುರ ಗ್ರಾಮದ ನಿವಾಸಿಯಾಗಿದ್ದು, ಸೋಮವಾರ ಇಂಟರ್ ಮೀಡಿಯೇಟ್ ಅಡ್ಮಿಶನ್ ಮಾಡಲು ಸಮೀಪದ ಸೈಬರ್ ಕೆಫೆಗೆ ತೆರಳಿದ್ದಳು. ರಾತ್ರಿಯಾದ್ರೂ ಯುವತಿ ಹಿಂದಿರುಗಿದ ಹಿನ್ನೆಲೆ ಪೋಷಕರು ಗ್ರಾಮದಲ್ಲ ಹುಡುಕಾಡಿದ್ದಾರೆ. ಆದ್ರೆ ಎಲ್ಲಿಯೂ ಯುವತಿ ಸಿಕ್ಕಿಲ್ಲ.
ಮಂಗಳವಾರ ಬೆಳಗ್ಗೆ ಗ್ರಾಮದ ಒಂದು ಕಿಲೋ ಮೀಟರ್ ದೂರದಲ್ಲಿ ಯುವತಿ ಶವ ಸಿಕ್ಕಿದೆ. ಯುವತಿಯ ಕುತ್ತಿಗೆ ಕೊಯ್ಯಲಾಗಿತ್ತು ಮತ್ತು ಬಟ್ಟೆ ಅಸ್ಥವ್ಯಸ್ತವಾಗಿತ್ತು. ಶವವನ್ನು ಮರೋಣತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ಇದೇ ಲಖಿಮಪುರದ ವ್ಯಾಪ್ತಿಯಲ್ಲಿ ಆಗಸ್ಟ್ 16ರಂದು 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕಣ್ಣು ಕಿತ್ತಿ, ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರೋದು ದೃಢಪಟ್ಟಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
Post a comment