"ಕೊರೋನಾ ಹೆಸರಿನಲ್ಲಿ ಜನರ ಜೀವದೊಂದಿಗೆ ಚೆಲ್ಲಾಟ ಅಸಹನೀಯ"-ಅನ್ಸಾರ್ ಅಹಮದ್
ಕಳೆದ ಹಲವು ತಿಂಗಳುಗಳಿಂದ ಕೊರೋನ ವಿಶ್ವದಾದ್ಯಂತ ತಾಂಡವಾಡುತ್ತಿದೆ. ಕೊರೋನಾ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳು ಸುಲಿಗೆ ಹಾಗೂ ಬೇರೆ ಬೇರೆ ರೀತಿಯ ದಬ್ಬಾಳಿಕೆ ನಡೆಸುತ್ತಿರುವುದು ನಿರಂತರವಾಗಿ ನಮ್ಮೆಲ್ಲರ ಗಮನಕ್ಕೆ ಬರುತ್ತಿದೆ.
76 ಬಡಗಬೆಟ್ಟು ಗ್ರಾಮದ ಇಂದಿರಾ ನಗರ ನಿವಾಸಿ ಗೃಹಿಣಿ ಯೊಬ್ಬಳ ಸಾವಿಗೆ ಖಾಸಗಿ ಆಸ್ಪತ್ರೆಯ ವೈದ್ಯರ ವೈಫಲ್ಯತೆಯೇ ಕಾರಣ ಎಂದು ಕುಟುಂಬಸ್ಥರು ಹಾಗೂ ಸಾರ್ವಜನಿಕರು ನೇರವಾಗಿ ಆರೋಪಿಸುತ್ತಿದ್ದಾರೆ. ನಂತರ ಇದನ್ನು ಮುಚ್ಚಿ ಹಾಕಲು ಕೊರೋನಾ ಪಾಸಿಟಿವ್ ಎಂಬ ವರದಿಯನ್ನು ನೀಡಲಾಗಿದೆ ಎಂಬುದು ಕುಟುಂಬಸ್ಥರ ಆರೋಪ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕುರಿತು ಸಂಬಂಧಪಟ್ಟ ಇಲಾಖೆ ನಿಷ್ಪಕ್ಷಪಾತ ತನಿಖೆಯನ್ನು ನಡೆಸಿ ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥ ಖಾಸಗಿ ಆಸ್ಪತ್ರೆಯ ಪರವಾನಿಗೆಯನ್ನು ರದ್ದುಪಡಿಸಿ ಕುಟುಂಬಸ್ಥರಿಗೆ ನ್ಯಾಯ ಒದಗಿಸಿ ಕೊಡಬೇಕಾಗಿದೆ.
ಖಾಸಗಿ ಆಸ್ಪತ್ರೆಗಳು ತಮ್ಮ ವೈಫಲ್ಯತೆಯನ್ನು ಮುಚ್ಚಿ ಹಾಕಲು ಕೊರೋನಾ ಹೆಸರಿನಲ್ಲಿ ಜನರನ್ನು ಬೆದರಿಸುತ್ತಿರುವುದು ಅಕ್ಷಮ್ಯ ಅಪರಾಧವಾಗಿರುತ್ತದೆ. ಇದು ಈ ಕೂಡಲೇ ನಿಲ್ಲಬೇಕಾಗಿದೆ. ಹಾಗೂ ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿರುವ ಗಮನಕ್ಕೆ ಬಂದಲ್ಲಿ ಅದಕ್ಕೆ ತಕ್ಕ ಉತ್ತರ ನೀಡಲು ಸಮರ್ಥರಾಗಿದ್ದೇವೆ. ಅದಕ್ಕೆ ಆಸ್ಪದ ನೀಡದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು
ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾಧ್ಯಕ್ಷರಾದ ಅನ್ಸಾರ್ ಅಹಮದ್ ರವರು ಎಚ್ಚರಿಕೆಯನ್ನು ನೀಡಿರುತ್ತಾರೆ.
Post a comment