ಬೆಳ್ಮಣ್:ಬಹುಮಾನ ವಿತರಣಾ ಸಮಾರಂಭ-Times Of Karkala
ಬೆಳ್ಮಣ್,ಆ: ಇಲ್ಲಿನ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಲಾದ 'ಆತ್ಮ ನಿರ್ಭರ ಭಾರತ ನಿರ್ಮಾಣದಲ್ಲಿ ನಮ್ಮ ಪಾತ್ರ' ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ನಾಳೆ(ಶನಿವಾರ) ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆಯಲಿದೆ.
ಕಾರ್ಕಳದ ಶಾಸಕ ಸುನಿಲ್ ಕುಮಾರ್ ಬಹುಮಾನ ವಿತರಣಾ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಪತ್ರಕರ್ತ ಶ್ರೀಕಾಂತ್ ಉಪನ್ಯಾಸ ನೀಡಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ ಎಸ್ ಹಾಗು ಜಿಲ್ಲಾ ಪಂಚಾಯತ್ ಸದಸ್ಯೆ ರೇಷ್ಮಾ ಉದಯ ಶೆಟ್ಟಿ ಉಪಸ್ಥಿತರಿರಲಿದ್ದಾರೆ.
Post a comment