ಉಪ್ಪಿನಂಗಡಿ:ಭೀತಿ ಹುಟ್ಟಿಸುತ್ತಿರುವ ಕಾಡಾನೆಗಳು-Times Of Karkala
ಉಪ್ಪಿನಂಗಡಿ: ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಡಾನೆಗಳು ಹಿಂಡು ಹಿಂಡಾಗಿ ಸಾಗುವ ಮೂಲಕ ವಾಹನ ಸವಾರರಲ್ಲಿ ಭೀತಿ ಮೂಡಿಸುತ್ತಿವೆ. ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಕೆಲವು ದಿನಗಳಿಂದೀಚೆಗೆ ಪ್ರತಿದಿನ ನಸುಕಿನಲ್ಲಿ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಯಿಂದ ಕೌಕ್ರಾಡಿಯತ್ತ ಸಾಗುವ ನಾಲ್ಕು ಆನೆಗಳ ಹಿಂಡು ಸಂಜೆಯ ವೇಳೆಗೆ ಅದೇ ದಾರಿಯಿಂದ ಮರಳುತ್ತಿವೆ.
ಭೂತಲಡ್ಕ, ಹೊನ್ನೆಜಾಲು ಮೊದಲಾದ ಗ್ರಾಮಗಳ ಭತ್ತದ ಪೈರು, ಬಾಳೆ, ತೆಂಗು ಇತ್ಯಾದಿ ಕೃಷಿಯನ್ನು ಆನೆಗಳು ಹಾನಿಪಡಿಸಿವೆ. ಇದರಿಂದ ಕೃಷಿಕರು ಆರ್ಥಿಕ ನಷ್ಟದ ಜತೆಗೆ ಭಯದಲ್ಲಿ ಬದುಕುವಂತಾಗಿದೆ. ಸ್ಥಳೀಯರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಅರಣ್ಯ ಪಾಲಕರು ಸ್ಥಳಕ್ಕೆ ಬಂದು ಸುಡುಮದ್ದನ್ನು ನೀಡಿ ಧೈರ್ಯ ತುಂಬಿ ಹೋಗುತ್ತಾರೆ ಹೊರತು ಆನೆಗಳ ಉಪಟಳಕ್ಕೆ ಕೊನೆ ಹಾಡಲು ಸಾಧ್ಯವಾಗಿಲ್ಲ ಎನ್ನುತ್ತಾರೆ ಸಂತ್ರಸ್ತರು.
Post a comment