ಪಡುಬಿದ್ರಿ:ಲಾಕ್ ಡೌನ್ ನಿಂದಾಗಿ ಕೆಲಸ ಕಳೆದುಕೊಂಡ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ-Times of karkala
ಪಡುಬಿದ್ರಿ,ಆ.10:ಲಾಕ್ ಡೌನ್ ಹಿನ್ನಲೆಯಿಂದಾಗಿ ಕೆಲಸ ಕಳೆದುಕೊಂಡು ಮನೆಯಲ್ಲಿದ್ದ ಅವಿವಾಹಿತ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆಗೆ ಶರಣಾದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.
ಮಂಗಳೂರಿನ ಕಂಪೆನಿಯೊಂದರಲ್ಲಿ ಕಳೆದ 15 ವರ್ಷಗಳಿಂದ ಸಾಫ್ಟ್ ವೇರ್ ನೌಕರನಾಗಿ ಕೆಲಸ ಮಾಡುತ್ತಿದ್ದ ಪುಷ್ಪರಾಜ್ (37) ಲಾಕ್ ಡೌನ್ ನಿಂದಾಗಿ ಕೆಲಸ ಕಳೆದುಕೊಂಡು ಮನೆಯಲ್ಲಿಯೇ ಇದ್ದರು.ಆಗಸ್ಟ್ 8 ರಂದು ಅಡುಗೆಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a comment