"ಪೊಲೀಸ್ ಇಲಾಖೆಯ ಕ್ರಮ ಸ್ವಾಗತಾರ್ಹ,ಗಲಭೆಕೋರರಿಂದ ಆದ ನಷ್ಟವನ್ನು ಗಲಭೆಕೋರರಿಂದಲೇ ಜಪ್ತಿ ಮಾಡಬೇಕು"-ಶಾಸಕ ವಿ.ಸುನೀಲ್ ಕುಮಾರ್ ಆಕ್ರೋಶ-Times of karkala

"ಪೊಲೀಸ್ ಇಲಾಖೆಯ ಕ್ರಮ ಸ್ವಾಗತಾರ್ಹ,ಗಲಭೆಕೋರರಿಂದ ಆದ ನಷ್ಟವನ್ನು ಗಲಭೆಕೋರರಿಂದಲೇ ಜಪ್ತಿ ಮಾಡಬೇಕು"-ಶಾಸಕ ವಿ.ಸುನೀಲ್ ಕುಮಾರ್ ಆಕ್ರೋಶ 


"ಪೊಲೀಸ್ ಇಲಾಖೆಯ ಕ್ರಮ ಸ್ವಾಗತಾರ್ಹ,ಗಲಭೆಕೋರರಿಂದ ಆದ ನಷ್ಟವನ್ನು ಗಲಭೆಕೋರರಿಂದಲೇ ಜಪ್ತಿ ಮಾಡಬೇಕು"-ಶಾಸಕ ವಿ.ಸುನೀಲ್ ಕುಮಾರ್ ಆಕ್ರೋಶ 
ಕಾರ್ಕಳ,ಆ.11: ಬೆಂಗಳೂರು ಪುಲಿಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ.

ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್‌ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ.

100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು ಕಚೇರಿಯನ್ನು ಒಡೆದು ಹಾಕಲು ಯತ್ನಿಸಿದ್ದಾರೆ. ಈ ವೇಳೆ ವಿಡಿಯೋ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿ ಮೊಬೈಲ್‌ ಕಿತ್ತುಕೊಳ್ಳಲು ಯತ್ನಿಸಿದ್ದಾರೆ.


ಘಟನೆಯಲ್ಲಿ ಶಾಸಕರ ಮನೆ ಕಿಟಕಿ ಗಾಜುಗಳು ಪುಡಿ ಪುಡಿಯಾಗಿದ್ದು, ಆಫೀಸ್ ಬಳಿ ನಿಂತಿದ್ದ ಕಾರುಗಳ ಮೇಲೆ ಬೆಂಕಿ ಹಚ್ಚಿದ್ದಾರೆ. ಬೆಂಕಿಯನ್ನು ನೋಡಿ ಅಲ್ಲಿದ್ದ ಜನ ಓಡಿ ಹೋಗಿ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ.  ಪೊಲೀಸರು ಅಕ್ಕಪಕ್ಕದ ಎಲ್ಲಾ ರಸ್ತೆ ಗಳನ್ನು ಮುಚ್ಚಿದ್ದಾರೆ. ಪೊಲೀಸರ ಮೇಲೆ ಯುವಕರ ಗುಂಪು ದಾಳಿ ಮಾಡಿದೆ.ಗಲಭೆಯನ್ನು ತಹಬದಿಗೆ ತರಲು ಯತ್ನಿಸಿದ ಪೊಲೀಸರ ಮೇಲೆಯೇ ಹಲ್ಲೆ ನಡೆದಿದ್ದು, ಪೊಲೀಸರು ನಡೆಸಿದ ಪೈರಿಂಗ್ ಗೆ ಮೂವರು ಬಲಿಯಾಗಿದ್ದಾರೆ.

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗಿನವರೆಗೂ ಗಲಭೆಗೆ ಸಂಬಂಧಿಸಿದಂತೆ 110 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಸ್ವಾಸ್ಥ್ಯ ಕೆಡಿಸುವಂತೆ ಪೋಸ್ಟ್ ಮಾಡಿದ್ದ ಎನ್ನಲಾದ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಕ ನವೀನ್ ನನ್ನು ಕೂಡಾ ಪೊಲೀಸರು ನಿನ್ನೆಯೇ ದಸ್ತಗಿರಿ ಮಾಡಿದ್ದಾರೆ.

ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಇನ್ನಷ್ಟು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. 10ಕ್ಕೂ ಹೆಚ್ಚು ಜನರು ಗುಂಡೇಟಿನಿಂದ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಕೇಸ್​ಗಳನ್ನು ದಾಖಲಿಸಿಕೊಳ್ಳಲಾಗಿದೆ.

ಈ ಕುರಿತಾಗಿ   ಕುರಿತಂತೆ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಆಕ್ರೋಶ  ವ್ಯಕ್ತಪಡಿಸಿದ್ದಾರೆ.ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, ಡಿ.ಜೆ ಹಳ್ಳಿಯ ಘಟನೆ ಯಲ್ಲಿ ಪೋಲಿಸ್ ಇಲಾಖೆ ಕೈಗೊಂಡ ಕ್ರಮವನ್ನು ಸ್ವಾಗತಿಸುತ್ತೇನೆ. ದೇಶದ ಕಾನೂನನ್ನು ಎಲ್ಲರೂ ಗೌರವಿಸಬೇಕು.ಗಲಭೆಯಿಂದ ಆದ ಸಾರ್ವಜನಿಕ  ನಷ್ಟವನ್ನು ಗಲಭೆಕೋರರಿಂದಲೇ ಜಪ್ತಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.  


ಜಾಹೀರಾತು   Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget