ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಶಾ ಕಾರ್ಯಕರ್ತೆಗೆ ಸನ್ಮಾನ-Times Of Karkala
ಹೆಬ್ರಿ,ಆ22 : ಆಶಾ ಕಾರ್ಯಕರ್ತೆ ಲಲಿತಾ ಅವರನ್ನುಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ನೇತ್ರತ್ವದಲ್ಲಿ ಶನಿವಾರ ಸನ್ಮಾನಿಸಲಾಯಿತು. ಇದೆ ವೇಳೆ ಚಾರದ ಸೀಲ್ ಡೌನ್ ಪ್ರದೇಶದ 30 ಮನೆಗಳಿಗೆ ಆಹಾರ ಧಾನ್ಯಗಳ ಕಿಟ್ ಕೂಡ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ನೀರೆ ಕೃಷ್ಣ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್.ಜನಾರ್ಧನ್, ಐಟಿಸೆಲ್ ಹೆಬ್ರಿ ಬ್ಲಾಕ್ ಅಧ್ಯಕ್ಷ ಸಂತೋಷ ನಾಯಕ್, ಮುದ್ರಾಡಿ ಅಧ್ಯಕ್ಷ ಪ್ರದೀಪ್ ಆಚಾರ್ಯ, ಸ್ಥಳೀಯ ಪ್ರಮುಖರಾದ ಶಶಿಕಲಾ ಆರ್ ಪಿ, ಜಯಕರ ಆಮ್ಲರ್, ಶರಣ್ ಮುಂತಾದವರು ಉಪಸ್ಥಿತರಿದ್ದರು.
Post a comment