ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ:ಕಾರ್ಕಳದ ಯುವಕ ಅರೆಸ್ಟ್-Times of karkala

ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ:ಕಾರ್ಕಳದ ಯುವಕ ಅರೆಸ್ಟ್-Times  of  karkala  

ಮಂಗಳೂರು ವಿಮಾನನಿಲ್ದಾಣಕ್ಕೆ ಬೆದರಿಕೆ ಕರೆ:ಕಾರ್ಕಳದ ಯುವಕ ಅರೆಸ್ಟ್-Times  of  karkala  

ಮಂಗಳೂರು,ಆ.19: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಹಿನ್ನಲೆಯಲ್ಲಿ ಕಾರ್ಕಳ ಮೂಲದ ಯುವಕನನ್ನು ಬಂಧಿಸಲಾಗಿದೆ.


ವಿಮಾನ ನಿಲ್ದಾಣದ ಮಾಜಿ ನಿರ್ದೇಶಕರಿಗೆ ಮಧ್ಯಾಹ್ನದ ಸುಮಾರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇವರು ತಕ್ಷಣ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ವಿಮಾನ ನಿಲ್ದಾಣವನ್ನು ಸಂಪೂರ್ಣ ತಪಾಸಣೆ ಮಾಡಲಾಗಿದ್ದು ಈ ವೇಳೆ ಯಾವುದೇ ಶಂಕಿತ ವಸ್ತು ಪತ್ತೆಯಾಗಿಲ್ಲ.

ಬೆದರಿಕೆ ಕರೆ ತನಿಖೆಯನ್ನು ಪೊಲೀಸರು ಕೈಗೆತ್ತಿಕೊಂಡಿದ್ದು, ಕಾರ್ಕಳದ ವ್ಯಾಪ್ತಿಯಲ್ಲಿ ಪೋನ್ ಕರೆ ಟವರ್ ಲೊಕೇಶನ್ ಪತ್ತೆಯಾಗಿತ್ತು.


ಸಿಸಿಬಿ ಪೊಲೀಸರು  ಹೆಬ್ರಿಯ ಮುದ್ರಾಡಿ ಗ್ರಾಮದ ವಸಂತ(33) ಎಂಬುವವನನ್ನು ಬಂಧಿಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಜನವರಿ ತಿಂಗಳಲ್ಲಿ ಆದಿತ್ಯ ರಾವ್ ಎಂಬಾತ ವಿಮಾನ ನಿಲ್ದಾಣದಕ್ಕೆ ಬೆದರಿಕೆ ಕರೆ ಹಾಕಿದ್ದ. ಆತ ಇರಿಸಿದ್ದ ಸ್ಫೋಟಕ ಪತ್ತೆಯಾದ ಬಳಿಕ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಬಳಿಕ ಆತನನ್ನು ಬಂಧಿಸಿದ್ದರು.

 

ಜಾಹೀರಾತು




 


  



Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget