ಕಾರ್ಕಳ:ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಕುಶ ಆರ್ ಮೂಲ್ಯ ಆಯ್ಕೆ-Times Of Karkala
ಕಾರ್ಕಳ,ಆ26 :ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಕುಶ ಆರ್ ಮೂಲ್ಯ ಆಯ್ಕೆಯಾಗಿದ್ದಾರೆ. ಇನ್ನ ಗ್ರಾಮಪಂಚಾಯತ್ ಉಪಾಧ್ಯಕ್ಷರಾಗಿದ್ದ ಇವರು ತಮ್ಮ ಕೆಲಸ ಕಾರ್ಯಗಳ ಮೂಲಕ ಜನಾನುರಾಗಿಯಾಗಿದ್ದಾರೆ.
ಕಳೆದ 22 ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿರುವ ಕುಶ ಮೂಲ್ಯ, ಮುಂಡ್ಕೂರು ಕುಲಾಲ ಸಂಘದ ಅಧ್ಯಕ್ಷರಾಗಿ,ಕಾರ್ಕಳ ಎಪಿಎಂಸಿ ನಾಮನಿರ್ದೇಶಿತ ಸದಸ್ಯರಾಗಿ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಯಾಗಿ ಹಾಗು ಬೆಲ್ಮನ್ ವಲಯ ಕಾಂಗ್ರೆಸ್ ಯುವ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
Post a comment