ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಕಾರ್ಕಳದ ಕ್ರೀಡಾ ಸಾಧಕರಿಗೆ ಅಭಿನಂದನೆ-Times of karkala
ಕಾರ್ಕಳ,ಆ.31:ರೋಟರಿ ಆನ್ಸ್ ಕ್ಲಬ್ ಮತ್ತು ರೋಟರ್ಯಾಕ್ಟ್ ಕ್ಲಬ್ ಇವರ ನೇತೃತ್ವದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾಬೆಟ್ಟು ಇಲ್ಲಿನ ವಿದ್ಯಾರ್ಥಿಯಾಗಿರುವ ರಾಷ್ಟ್ರಮಟ್ಟದ ವಿಜೇತ ಹೊನ್ನೇಶ್ ಅವರಿಗೆ ಸನ್ಮಾನಿಸಲಾಯಿತು. ಹಾಗೂ ಆನ್ಸ್ ಸಂಸ್ಥೆಯಿಂದ ಕಾರ್ಕಳದ ಮೊದಲ ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಹಾಗೂ ಅವರ ಶ್ರೀಮತಿ ಯಾಗಿರುವ ಮಹಿಳಾ ಕ್ರೀಡಾಪಟು ಅಪ್ಸರ ರೋಹಿತ್ ಕುಮಾರ್ ಕಟೀಲ್ ಅವರನ್ನು ಗೌರವಿಸಲಾಯಿತು.
ಅದೇ ರೀತಿ ಏಕಲವ್ಯ ಪ್ರಶಸ್ತಿ ವಿಜೇತ ಕು. ಅಕ್ಷತಾ ಪೂಜಾರಿ ಯವರಿಗೆ ಅವರಿಗೆ ಹೂಗುಚ್ಛ ನೀಡಿ ಅಭಿನಂದನೆಯನ್ನು ಸಲ್ಲಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಆನ್ಸ್ ಕ್ಲಬ್ ನ ಅಧ್ಯಕ್ಷೆ ರೋ. ರಮಿತಾ ಶೈಲೇಂದ್ರ ಮತ್ತು ಕಾರ್ಯದರ್ಶಿ ಸುಮಾ ನಾಯಕ್ ಅವರು ಹಾಗೂ ರೋಟರ್ಯಾಕ್ಟ್ ಕ್ಲಬ್ ನ ಕಾರ್ಯದರ್ಶಿ ಸಮೀರ್ ಹೆಗಡೆ, DRR ಪ್ರಶಾಂತ್ ಆಚಾರ್ಯ ಉಪಸ್ಥಿತರಿದ್ದರು.
Post a comment