ಕಾರ್ಕಳ/ಬಜಗೋಳಿ:ರಸ್ತೆ ಅಪಘಾತ,ಚಿಕಿತ್ಸೆ,ಫಲಕಾರಿಯಾಗದೆ ವ್ಯಕ್ತಿ ಸಾವು-Times of karkala
ಕಾರ್ಕಳ,ಆ.06::ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇತ್ತೀಚೆಗೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಜಗೋಳಿ ಮುಡಾರು ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದಿತ್ತು.ಇದರ ಅರಿಣಾಮವಾಗಿ ದುರ್ಗಾ ಗ್ರಾಮದ ನಿವಾಸಿ ಹುಂಡಿಗ(70) ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Post a comment