ಕಾರ್ಕಳ:ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ:ರಕ್ತದಾನ ಶಿಬಿರ-Times Of Karkala
ಕಾರ್ಕಳ,ಆ.26:ರಕ್ತದಾನ ಶ್ರೇಷ್ಠ ದಾನ. ಒಬ್ಬನ ರಕ್ತ ಮೂವರಿಗೆ ವರದಾನವಾಗುತ್ತದೆ ಎಂದು ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ವಿಭಾಗದ ಅಧ್ಯಕ್ಷ ಡಾ ರಾಮಚಂದ್ರ ಜೋಶಿ ಹೇಳಿದರು.ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ದಿನಾಚರಣೆಯ ಪ್ರಯುಕ್ತ ಜ್ಞಾನಸುಧಾ ಸಂಸ್ಥೆಯ ಆವರಣದಲ್ಲಿ ನಡೆದ ಸಂಸ್ಥಾಪಕರ ದಿನಾಚರಣೆ ಹಾಗು ಬೃಹತ್ ರಕ್ತದಾನ ಶಿಬಿರವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮವು ಅಜೆಕಾರು ಪದ್ಮ ಗೋಪಾಲ್ ಎಜುಕೇಷನ್ ಟ್ರಸ್ಟ್, ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಹಾಗು ಕುಂದಾಪುರ, ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾರ್ಕಳ ಇದರ ಸಹಯೋಗದಲ್ಲಿ ನಡೆಯಿತು.
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯ ಅಧ್ಯಕ್ಷ ಪ್ರಶಾಂತ್ ಬೆಳ್ಳಿರಾಯ,ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾರ್ಕಳ ಇದರ ಅಧ್ಯಕ್ಷ ಭಾಸ್ಕರ್ ಕುಲಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಜೆಕಾರು ಪದ್ಮ ಗೋಪಾಲ್ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷ ಡಾ ಸುಧಾಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟಿ ಕರುಣಾಕರ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ಶಾಂತಿರಾಜ್ ಹೆಗ್ಡೆ ಹಾಗು ಉಭಯ ಸಂಸ್ಥೆಗಳ ಪ್ರಾಂಶುಪಾಲ ಉಪಪ್ರಾಂಶುಪಾಲರು ಉಪಸ್ಥಿತರಿದ್ದರು.
ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ ಸ್ವಾಗತಿಸಿದರು. ಉಪನ್ಯಾಸಕಿ ಸಂಗೀತ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ದಾನಿಗಳಿಂದ ೭೫ ಯುನಿಟ್ ರಕ್ತ ಸಂಗ್ರಹಿಸಲಾಯಿತು.
ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ ಸ್ವಾಗತಿಸಿದರು. ಉಪನ್ಯಾಸಕಿ ಸಂಗೀತ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ದಾನಿಗಳಿಂದ ೭೫ ಯುನಿಟ್ ರಕ್ತ ಸಂಗ್ರಹಿಸಲಾಯಿತು.
Post a comment