ಮಿಯ್ಯಾರು:ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಜೆರಾಲ್ಡ್ ಡಿಸಿಲ್ವಾ ರಾಜೀನಾಮೆ:ಮುಂದಿನ ನಡೆ ಬಿಜೆಪಿ ಕಡೆ?-Times of karkala
ಕಾರ್ಕಳ,ಆ.28:ಮಿಯ್ಯಾರು ಕಾಂಗ್ರೆಸ್ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ, ಎಪಿಎಂಸಿ ಯ ಸದಸ್ಯರೂ ಆಗಿದ್ದ ಜೆರಾಲ್ಡ್ ಡಿ. ಸಿಲ್ವಾ ರವರು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ್ ಮಡಿವಾಳ,ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು ರವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಜೆರಾಲ್ಡ್ ಡಿಸಿಲ್ವಾ ರವರು ಬಿಜೆಪಿ ಸೇರುತ್ತಾರೆ ಎಂಬ ಗುಮಾನಿಯಿದ್ದು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದಾರೆ.
Post a comment