ಉಡುಪಿ:ಬಿಜೆಪಿ ಮುಖಂಡನ ಪತ್ನಿಯ ಸಾವಿನ ಹಿಂದೆ ವೈದ್ಯರ ನಿರ್ಲಕ್ಷ್ಯ?-ಕುಟುಂಬಸ್ಥರ ಆಕ್ರೋಶ-Times Of Karkala

ಉಡುಪಿ:ಬಿಜೆಪಿ ಮುಖಂಡನ ಪತ್ನಿಯ ಸಾವಿನ ಹಿಂದೆ ವೈದ್ಯರ ನಿರ್ಲಕ್ಷ್ಯ?-ಕುಟುಂಬಸ್ಥರ ಆಕ್ರೋಶ-Times Of Karkala

 ಉಡುಪಿ,ಆ 22: ಇಂದಿರಾ ನಗರದ ನಿವಾಸಿಯಾಗಿದ್ದ ಯುವತಿ ರಕ್ಷಾ (26) ಅಲ್ಪ ಕಾಲದ    ಅನಾರೋಗ್ಯದಿಂದ  ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಯುವತಿಯ ಕುಟುಂಬ ಸದಸ್ಯರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಸ್ಥಳೀಯ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷರೂ ಆಗಿರುವ ರಕ್ಷಾ ಅವರ ಪತಿ ಶಿವಪ್ರಸಾದ್, ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಈ ಪ್ರಕರಣದ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ರಕ್ಷಾ ಕಳೆದ ಎರಡು ಮೂರು ದಿನಗಳಿಂದ  ಅನಾರೋಗ್ಯದಿಂದ ಬಳಲುತ್ತಿದ್ದರು. ಶುಕ್ರವಾರ ಬೆಳಿಗ್ಗೆ ರಕ್ಷಾರನ್ನು ಚಿಕಿತ್ಸೆಗಾಗಿ ಮಿಷನ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಳಿಕ ಮನೆಗೆ ವಾಪಾಸ್‌ ಕರೆತರಲಾಗಿತ್ತು. ಬೆಳಿಗ್ಗೆ 9 ಗಂಟೆ ಸುಮಾರಿಗೆ ಆಕೆಯನ್ನು ಮನೆಯವರು ಕರೆದಾಗ ಆಕೆ ಯಾವುದೇ ಸ್ಪಂದನೆ ನೀಡಿಲ್ಲ. ತಕ್ಷಣ ಆಕೆಯನ್ನು ಮಿಷನ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಳಿಕ ಆದರ್ಶ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಅಷ್ಟರಲ್ಲಿ ಆಸ್ಪತ್ರೆಯ ವೈದ್ಯರು ಆಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ ಎಂದು ಹೇಳಲಾಗಿದೆ.

"ವೈದ್ಯರು ಇಂಜೆಕ್ಷನ್ ನೀಡಿದ ನಂತರ ರಕ್ಷಾ ಪ್ರಜ್ಞೆ ಕಳೆದುಕೊಂಡರು. ಆದರೆ, ನಾವು ಮತ್ತೆ ಆಸ್ಪತ್ರೆಗೆ ತೆರಳಿ ಈ ಇಂಜೆಕ್ಷನ್ ಬಗ್ಗೆ ಕೇಳಿದಾಗ, ಆಸ್ಪತ್ರೆಯ ಅಧಿಕಾರಿಗಳು ಸಂಬಂಧಪಟ್ಟ ವೈದ್ಯರು ಇಲ್ಲ ಎಂದು ಹೇಳಿದ್ದಾರೆ. ಆದರ್ಶ ಆಸ್ಪತ್ರೆಯಲ್ಲಿ ರಕ್ಷಾ ಸಾವನ್ನಪ್ಪಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ " ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

 ರಕ್ಷಾ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು ಎಂದು ಹೇಳಲಾಗಿದೆ. ಆದರೆ ರ್‍ಯಾಪಿಡ್‌ ಆಂಟಿಜನ್‌ ಟೆಸ್ಟ್‌ನಲ್ಲಿ ನೆಗೆಟಿವ್‌ ಆಗಿತ್ತು ಎನ್ನಲಾಗಿದೆ. ಹಾಗೆಯೇ ಮೃತ ದೇಹದ ಅಂತಿಮ ಸಂಸ್ಕಾರದ ವಿಚಾರದಲ್ಲಿ ಗೊಂದಲಗಳು ಉಂಟಾಗಿದೆ ಎಂದು ವರದಿಯಾಗಿದೆ.

ಸ್ಥಳೀಯರು ಮತ್ತು ಮೃತರ ಕುಟುಂಬ ಸದಸ್ಯರು ಅಜ್ಜರಕಾಡು ಜಿಲ್ಲಾ ಶವಗಾರಕ್ಕೆ ಆಗಮಿಸಿ ರಕ್ಷಾಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ . "ಆಸ್ಪತ್ರೆಯ ಅಧಿಕಾರಿಗಳು ರಕ್ಷಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೇಳುವ ಮೂಲಕ ಸತ್ಯವನ್ನು ಮರೆಮಾಡಲು ಪ್ರಯತ್ನಿಸುತ್ತಿದ್ದಾರೆ" ಎಂದು ಅವರು ಆರೋಪಿಸಿದ್ದಾರೆ.ಮೃತ ರಕ್ಷಾ  ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.


 

ಜಾಹೀರಾತು
  Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget