"ಯುವ ಸಮುದಾಯ ಸಾಮಾಜಿಕ ಜಾಲತಾಣದಲ್ಲಿ ಅನಗತ್ಯ ಚಾಲೆಂಜ್ ನೀಡುವ ಬದಲು ಸಮಾಜಮುಖಿ ಕೆಲಸಗಳ ಚಾಲೆಂಜ್ ನೀಡಬೇಕು"-ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ-Times of karkalaಜಾಹೀರಾತು 

ಜಾಹೀರಾತು 

ಜಾಹೀರಾತು 

 ಜಾಹೀರಾತು 

 ಜಾಹೀರಾತು 
 ಜಾಹೀರಾತು 

  ಜಾಹೀರಾತು 

"ಯುವ ಸಮುದಾಯ  ಸಾಮಾಜಿಕ ಜಾಲತಾಣದಲ್ಲಿ ಅನಗತ್ಯ ಚಾಲೆಂಜ್ ನೀಡುವ ಬದಲು ಸಮಾಜಮುಖಿ ಕೆಲಸಗಳ ಚಾಲೆಂಜ್ ನೀಡಬೇಕು"-ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ-Times of karkala


ಕುಂದಾಪುರ:ಯುವ ಸಮುದಾಯ ಸಾಮಾಜಿಕ ಜಾಲತಾಣದಲ್ಲಿ ಅನಗತ್ಯ ಚಾಲೆಂಜ್ ನೀಡುವ ಬದಲು ಸಾಮಾಜಿಕ ಕಾರ್ಯಗಳನ್ನು ಮಾಡಿ,ಇನ್ನೊಬ್ಬರಿಗೆ ಚಾಲೆಂಜ್ ನೀಡುವ ಮೂಲಕ ಇತರರನ್ನು ತೊಡಗಿಸಿಕೊಳ್ಳುವಂತೆ ಮಾಡಬೇಕು ಎಂದು ಉಡುಪಿ ಜಿಲ್ಲಾ ಬಿಜೆಪಿ  ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಕರೆ ನೀಡಿದರು. ಅವರು ಕುಂದಾಪುರ ಕ್ಷೇತ್ರ ಬಿಜೆಪಿ ಯುವಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿರುವ ‘ಯುವ ಹಸಿರು’ ಅಭಿಯಾನನ್ನು ಉದ್ದೇಶಿಸಿ ಮಾತನಾಡಿದರು.


‘ಯುವ ಹಸಿರು’ ಶೀರ್ಷಿಕೆಯಡಿಯಲ್ಲಿ ಗಿಡಗಳನ್ನು ನೆಡುವ ಈ ಕಾರ್ಯಕ್ರಮವು ಇತರರಿಗೂ ಮಾದರಿಯಾಗಲಿದ್ದು ಸಾಲುಮರದ ತಿಮ್ಮಕ್ಕನಂತಹ ಹಿರಿಯರು ಯುವಕರಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.


ಉಳ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಕಿರಣ್ ಕೊಡ್ಗಿ ಅವರು ಸಸಿ ನೆಡುವ ಮೂಲಕ  ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಕುಂದಾಪುರ ಬಿಜೆಪಿ ಯುವಮೊರ್ಚಾ ಅಧ್ಯಕ್ಷ ಅವಿನಾಶ್ ಉಳ್ತೂರು, ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ, ತಾ.ಪಂ ಸದಸ್ಯೆ ರೂಪಾ ಪೈ, ಬಿಜೆಪಿಯ ಮುಖಂಡರಾದ ಸದಾನಂದ ಬಳ್ಕೂರು, ಸುನೀಲ್ ಶೆಟ್ಟಿ ಹೇರಿಕುದ್ರು, ಶರತ್ ಶೆಟ್ಟಿ ಉಪ್ಪುಂದ, ಪ್ರವೀಣ್ ಕುಮಾರ್ ಶೆಟ್ಟಿ, ಸಂಪತ್ ಕುಮಾರ್ ಶೆಟ್ಟಿ, ಸತೀಶ್ ಪೂಜಾರಿ ವಕ್ವಾಡಿ, ಸುರೇಶ್ ಶೆಟ್ಟಿ ಗೋಪಾಡಿ, ಸುಧೀರ್ ಕೆ.ಎಸ್., ಸುಧೀರ್ ಮಲ್ಯಾಡಿ, ವಿನೋದ್ ರಾಜ್, ಕುಂದಾಪುರ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ್ ಅಂಕದಕಟ್ಟೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  
ಜಾಹೀರಾತು 
 
  ಜಾಹೀರಾತು 


Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget