ಕಾರ್ಕಳ,ಸೆ.17. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 70ನೆಯ ಜನ್ಮದಿನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಕಾರ್ಕಳ ವತಿಯಿಂದ ರಕ್ತದಾನ ಶಿಬಿರ ನಡೆಯಿತು.


ಶಿಬಿರದಲ್ಲಿ ಶಾಸಕರಾದ ವಿ ಸುನಿಲ್ ಕುಮಾರ್ ಹಾಗೂ ಉಡುಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ವಿಖ್ಯಾತ್ ಶೆಟ್ಟಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರೂ ಈ ಸಂದರ್ಭ ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.
ಬಿಜೆಪಿ ಹಿರಿಯ ಮುಖಂಡರಾದ ಎಂ.ಕೆ.ವಿಜಯಕುಮಾರ್ ಶಿಬಿರವನ್ನು ಉದ್ಘಾಟಿಸಿದರು. ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಮಹಾವೀರ್ ಹೆಗ್ಡೆ ಅಧ್ಯಕ್ಷತೆ ವಹಿಸಿದರು. ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಮಣಿರಾಜ್ ಶೆಟ್ಟಿ, ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ತಾಲೂಕು ಪ್ರಧಾನ ಕಾರ್ಯದರ್ಶಿ ಜಯರಾಮ್ ಸಾಲಿಯಾನ್, ನವೀನ್ ನಾಯಕ್ ,ತಾಲೂಕು ಯುವ ಮೋರ್ಚಾ ಅಧ್ಯಕ್ಷರಾದ ಸುಹಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾದ ಯೋಗೀಶ್ ಸಾಲಿಯಾನ್, ಯುವ ಮೋರ್ಚಾ ಪದಾಧಿಕಾರಿಗಳು ಸಹಕಾರದಿಂದ ಯಶಸ್ವಿಯಾಗಿ ನೆರವೇರಿಸಿದರು.
Post a comment