ಕೊರೋನಾಗೆ ಔಷಧಿ ಸಿಗುವವರೆಗೆ ನಿರ್ಲಕ್ಷ್ಯ ಬೇಡ:ಮೋದಿ ಎಚ್ಚರಿಕೆ-Times Of Karkala

ಭೋಪಾಲ್,ಸೆ,12:ದೇಶದಲ್ಲಿ ಕೊರೊನಾ  ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವಂತೆಯೇ, ಔಷಧಿ ಸಿಗುವವರೆಗೂ ಕೊರೊನಾ ವೈರಸ್ ಕುರಿತು ನಿರ್ಲಕ್ಷ್ಯತನ ಬೇಡ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.
ಮಧ್ಯಪ್ರದೇಶದಲ್ಲಿ  ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿಯ ಗೃಹಪ್ರವೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೋದಿ, ಕೊರೋನಾ ವೈರಸ್ ಸೋಂಕಿಗೆ ಪರಿಣಾಮಕಾರಿ  ಔಷಧಿ ಸಿಗುವವರೆಗೂ ಜನರು ತಮ್ಮ ಎಚ್ಚರಿಕೆಯಲ್ಲಿ ತಾವಿರಬೇಕು. ಕೋವಿಡ್ ಸೋಂಕು ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ. ಔಷಧಿ ಸಿಗುವವರೆಗೂ ನಿರ್ಲಕ್ಷ್ಯ ಬೇಡ. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವಿಕೆಯನ್ನು ತಪ್ಪದೇ ಪಾಲಿಸಬೇಕು ಎಂದು  ತಿಳಿಸಿದ್ದಾರೆ.

 

ಜಾಹೀರಾತು
































Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget