ಸಾಣೂರು:ಚಿಕಿತ್ಸೆ ಫಲಕಾರಿಯಾಗದೆ ವಿಘ್ನೇಶ್ ಆಚಾರ್ಯ ನಿಧನ
ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಾಣೂರಿನ ಯುವಕ ವಿಘ್ನೇಶ್ ಆಚಾರ್ಯ (20) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೆಲ ದಿನಗಳ ಹಿಂದೆ ಕರಿಯಕಲ್ಲು ಬೈಪಾಸ್ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಭುವನೇಂದ್ರ ಕಾಲೇಜಿನ ಬಿಸಿಎ ವಿದ್ಯಾರ್ಥಿ ವಿಘ್ನೇಶ್ ಆಚಾರ್ಯರನ್ನು ಮಣಿಪಾಲ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ಚಿಕೆತ್ಸೆ ಫಲಿಸದೆ ಅವರು ಕೊನೆಯುಸಿರು ಎಳೆದಿದ್ದಾರೆ.
Post a comment