ಕಾರ್ಕಳದ ಪ್ರತಿಷ್ಠಿತ ಕಾಲೇಜಿಗೂ ಗಾಂಜಾ ಡ್ರಗ್ಸ್ ಸಪ್ಲೈ?ಎನ್‌ಸಿಬಿ ಅಧಿಕಾರಿ ಹೇಳಿದ್ದೇನು?-Times of karkala

ಬೆಂಗಳೂರು: ಡಾರ್ಕ್‌ನೆಟ್ ಮೂಲಕ ಡ್ರಗ್ಸ್ ಖರೀದಿಸಿ ತಂದು ಉಡುಪಿ ಹಾಗೂ ಚೆನ್ನೈನಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪದಡಿ ನಾಲ್ವರನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಕೇರಳದ ಕೆ. ಪ್ರಮೋದ್, ಫಾಹಿಮ್, ಕರ್ನಾಟಕದ ಎ. ಹಶೀರ್ ಹಾಗೂ ಎಸ್‌.ಎಸ್‌. ಶೆಟ್ಟಿ ಬಂಧಿತರು. ಅವರು ಸಾಗಿಸುತ್ತಿದ್ದ 750 ಎಂಡಿಎಂಎ ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಎನ್‌ಸಿಬಿ ಅಧಿಕಾರಿಯೊಬ್ಬರು  ತಿಳಿಸಿದ್ದಾರೆ.

ರಾಷ್ಟ್ರೀಯ ಮಾದಕ ವಸ್ತುಗಳ ನಿಯಂತ್ರಣ ದಳದ (ಎನ್‌ಸಿಬಿ) ಅಧಿಕಾರಿಗಳು ಜುಲೈನಲ್ಲಿ ಕಾರ್ಯಾಚರಣೆ ನಡೆಸಿ ಅಂಚೆ ಕಚೇರಿಗಳಲ್ಲಿ ಪಾರ್ಸೆಲ್ ಹೋಗುತ್ತಿದ್ದ ಡ್ರಗ್ಸ್ ಜಪ್ತಿ ಮಾಡಿದ್ದರು. ಡ್ರಗ್ಸ್ ಯಾರು ತರಿಸಿದ್ದರು ಎಂಬುದು ಆರಂಭದಲ್ಲಿ ಗೊತ್ತಿರಲಿಲ್ಲ. ಅದರ ಹೆಚ್ಚಿನ ತನಿಖೆ ಕೈಗೊಂಡಾಗಲೇ ಈ ನಾಲ್ವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಎರಡು ವರ್ಷಗಳಿಂದ ಈ ಗ್ಯಾಂಗ್ ಡ್ರಗ್ಸ್ ಮಾರಾಟ ಮಾಡುತ್ತಿತ್ತು. ಉಡುಪಿಯ ಮಣಿಪಾಲ್ ವಿಶ್ವವಿದ್ಯಾಲಯ, ಎನ್‌ಎಂಎಎಂಐಟಿ ಕಾಲೇಜು, ಮಣಿಪಾಲ್ ಕ್ಲಬ್‌ಗಳು, ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಡ್ರಗ್ಸ್  ಮಾರುತ್ತಿದ್ದರು. ಈ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ’ ಎಂದೂ ಅಧಿಕಾರಿ ವಿವರಿಸಿದರು.

 

 

ಜಾಹೀರಾತುSource: ವಿಜಯವಾಣಿ 

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget