ನವದೆಹಲಿ,ಸೆ,13:ಮಧ್ಯಪ್ರದೇಶದಲ್ಲಿ ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯಡಿ ನಿರ್ಮಿಸಲಾದ 1.75 ಲಕ್ಷ ಮನೆಗಳನ್ನು ರಾಜ್ಯದ ಬಡ ಫಲಾನುಭವಿಗಳಿಗೆ ಶನಿವಾರ ಪ್ರಧಾನಿ ಮೋದಿಯವರು ಅಧಿಕೃತವಾಗಿ ಹಸ್ತಾಂತರ ಮಾಡಿದರು. ರಾಜ್ಯ ಸರಕಾರದ ಸಹಕಾರದೊಂದಿಗೆ ಏರ್ಪಡಿಸಲಾದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದರು.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಮಧ್ಯಪ್ರದೇಶ ಸರಕಾರ ರೂ ೨೩ ಕೋತಿ ಖರ್ಚು ಮಾಡಿದ್ದು, ಇದರಿಂದ ವಲಸೆ ಕಾರ್ಮಿಕರಿಗೆ ಎರಡು ರೀತಿಯಲ್ಲಿ ಲಾಭವಾಗಿದೆ. ವಾಪಸಾದ ಕಾರ್ಮಿಕರಿಗೆ ಉದ್ಯೋಗ ದೊರಕಿರುವುದಲ್ಲದೆ, ಕಾಮಗಾರಿ ಚಟುವಟಿಕೆಗಳಿಗೆ ಬೇಕಾದ ಸಾಮಗ್ರಿಗಳೂ ಮಾರಾಟವಾಗಿವೆ. ಈ ವೇಳೆ ಸಿ ಎಂ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಬಿಜೆಪಿ ಮುಖಂಡರಾದ ಜ್ಯೋತಿರಾದಿತ್ಯ ಸಿಂಧಿಯಾ ಉಪಸ್ಥಿತರಿದ್ದರು.
Post a comment