ಬೆಂಗಳೂರು,ಸೆ, 20: ನೈಋುತ್ಯ ಮುಂಗಾರು ಕರಾವಳಿ ಹಾಗೂ ಮಲೆನಾಡಿನಲ್ಲಿ ಚುರುಕಾಗಿದ್ದು, ಉತ್ತರ ಒಳನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ. ಶನಿವಾರ ಮಧ್ಯಾಹ್ನದಿಂದಲೇ ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ,ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯಕ್ಕೆ ಹೊಂದಿಕೊಂಡಿರುವ ಕೇರಳದ ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ಎರಡು ದಿನ ರೆಡ್ ಅಲರ್ಟ್ಗೆ ಸೂಚಿಸಿದ್ದು, ಕರಾವಳಿ ತೀರದುದ್ದಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸೆ.23ರವರೆಗೆ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
Post a comment