ಹೆಬ್ರಿ,ಸೆ 18: ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ, ಪ್ರಸಾದ್ ನೇತ್ರಾಲಯ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಇಲಾಖೆ ಇದರ ಸಹಯೋಗದಲ್ಲಿ ಸೆಪ್ಟೆಂಬರ್ 17 ರಂದು ನರೇಂದ್ರ ಮೋದಿ ಜನ್ಮ ದಿನಾಚರಣೆ ಅಂಗವಾಗಿ ಹೆಬ್ರಿ ರಾಮ್ ಮಂದಿರದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಶಾಸಕ ವಿ ಸುನಿಲ್ ಕುಮಾರ್ ಉದ್ಘಾಟಿಸಿದರು.
ಕಾರ್ಕಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಮಹಾವೀರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಸುಮಾರು 450 ಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನ ಪಡೆದರು. ಈ ಸಂದರ್ಭದಲ್ಲಿ ಪ್ರಸಾದ್ ನೇತ್ರಾಲಯದ ಆಡಳಿತ ನಿರ್ದೇಶಕ ಡಾ ಕೃಷ್ಣಾ ಪ್ರಸಾದ್, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣೆ ಶೆಟ್ಟಿ, ಗೀತಾಂಜಲಿ ಸುವರ್ಣ, ಉದ್ಯಮಿ ಸತೀಶ್ ಪೈ, ಗುರುದಾಸ್ ಶೆಣೈ, ದಿನೇಶ್ ಪೈ, ಬಿಜೆಪಿ ಮುಖಂಡರಾದ ಎಂ ಕೆ ವಿಜಯ್ ಕುಮಾರ್, ಮಣಿರಾಜ್ ಶೆಟ್ಟಿ, ಹೆಬ್ರಿ ತಾಲೂಕು ಪಂಚಾಯತ್ ಅಧ್ಯಕ್ಷ ರಮೇಶ್ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯೆ ಜ್ಯೋತಿ ಹರೀಶ್, ರವೀಂದ್ರ ಮಡಿವಾಳ, ರೇಷ್ಮಾ ಶೆಟ್ಟಿ, ಜಯರಾಮ್ ಸಾಲ್ಯಾನ್, ನವೀನ್ ನಾಯಕ್, ಸತೀಶ್ ಶೆಟ್ಟಿ ಮುಟ್ಲುಪಾಡಿ ಉಪಸ್ಥಿತರಿದ್ದರು. ಮಾಲಿನಿ ಜೆ ಸ್ವಾಗತಿಸಿ, ಪ್ರಮೀಳಾ ಹರೀಶ್ ಕಾರ್ಯಕ್ರಮ ನಿರೂಪಿಸಿದರು. ವಿನಯ್ ಬಂಗೇರ ವಂದಿಸಿದರು.
Post a comment