ಕಾಸರಗೋಡು,ಸೆ 6: ಸಂವಿಧಾನದ ಮೂಲ ರೂಪು ರೇಷೆಗಳು ತಿದ್ದುಪಡಿಗೆ ಒಳಪಡಲಾರವು ಎಂಬ ಸುಪ್ರೀ ಕೋರ್ಟ್ ನ ಐತಿಹಾಸಿಕ ತೀರ್ಪಿಗೆ ಕಾರಣರಾದ ಕಾಸರಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮಿ ಶನಿವಾರ ಮಧ್ಯರಾತ್ರಿ ದೈವಾದೀನರಾಗಿದ್ದಾರೆ.
1973ರಲ್ಲಿ ಕೇಶವಾನಂದ ವೆರ್ಸಸ್ ಕೇರಳ ಸರಕಾರ ಪ್ರಕರಣ ದೇಶದಲ್ಲಿ ಭಾರಿ ಸಂಚಲನ ಉಂಟುಮಾಡಿತ್ತು. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅತೀ ಅಪರೂಪ ಎಂಬಂತೆ 13 ಮಂದಿ ನ್ಯಾಯಾಧೀಶರ ಪೀಠ ರಚಿಸಿ ಕೈಗೊಂಡಿತ್ತು. ಈ ಪ್ರಕರಣ ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೇಶವಾನಂದ ಸ್ವಾಮೀಜಿಯನ್ನು ಚಿರಸ್ಥಾಯಿಯಾಗಿಸಿದೆ.
ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ, ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.ಧಾರ್ಮಿಕವಾಗಿ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನವನ್ನು ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಕೆಲವು ದಿನಗಳ ಹಿಂದಷ್ಟೇ ತಮ್ಮ 60ನೇ ಚಾತುರ್ಮಾಸ ವ್ರತಾಚರಣೆಯನ್ನು ಶ್ರೀಗಳು ಸಮಾಪ್ತಿಗೊಳಿಸಿದ್ದರು.
Post a comment