ಬೆಂಗಳೂರು, ಸೆ,19 : ಮುಂಬೈ ಸೇರಿದಂತೆ ಮಹಾರಾಷ್ಟ್ರದ ವಿವಿದೆಡೆಗಳಿಗೆ ಮಂಗಳವಾರದಿಂದ(ಸೆ 22) ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಪುನರಾರಂಭಗೊಳ್ಳಲಿದೆ.
ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಗಳಿಂದ ಮುಂಬೈ, ಪುಣೆ, ಕೊಲ್ಹಾಪುರ ಹಾಗು ಮಹಾರಾಷ್ಟ್ರದ ವಿವಿದೆಡೆಗಳಿಗೆ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಆರಂಭಗೊಳ್ಳಲಿದೆ ಎಂದು ಕೆ ಎಸ್ ಆರ್ ಟಿಸಿ ಅಧಿಕಾರಿಗಳು ಹೇಳಿದ್ದಾರೆ.
ಪ್ರಯಾಣಿಕರು ಕೋವಿಡ್ 19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗಿದ್ದು, ಅರೋಗ್ಯ ಸಮಸ್ಯೆ ಇರುವವರಿಗೆ ಪ್ರಯಾಣಕ್ಕೆ ಅವಕಾಶ ನಿರಾಕರಿಸಲಾಗಿದೆ.
ಕೆ ಎಸ್ ಆರ್ ಟಿ ಸಿ ಜಾಲ ತಾಣದಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಬಹುದಾಗಿದೆ.
Post a comment