ಕಾರ್ಕಳ,ಸೆ,18: ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನ 20ನೇ ವರ್ಷದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಸತೀಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಇದೇ ವೇಳೆ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವೂ ಜರಗಿತು.

ಮಹಾಸಭೆಯಲ್ಲಿ ಸಂಘದಲ್ಲಿ ಕಾರ್ಯದರ್ಶಿ ಪ್ರಶಾಂತ್ ಪೂಜಾರಿ 2019-20ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ಸಂಘದ ಅಂತರಿಕ ಲೆಕ್ಕ ಪರಿಶೋಧಕರಾದ ಹರಿಪ್ರಸಾದ್ ಆಚಾರ್ಯರವರು 2019-20ನೇ ಸಾಲಿನ ಲೆಕ್ಕಪತ್ರ ಮಂಡಿಸಿದರು.
ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಸಭೆಯಲ್ಲಿ ನೂತನ ಅಧ್ಯಕ್ಷ ಉದಯ ಅಂಚನ್ ಬೋಳ, ನೂತನ ಉಪಾಧ್ಯಕ್ಷ ಪ್ರಶಾಂತ್ ಪೂಜಾರಿ, ನೂತನ ಕಾರ್ಯದರ್ಶಿ ಹರಿಪ್ರಸಾದ್ ಆಚಾರ್ಯ, ನೂತನ ಜೊತೆ ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ನೂತನ ಕೋಶಾಧಿಕಾರಿ ವೀಣಾ ಪೂಜಾರಿ, ನೂತನ ಮಹಿಳಾ ಸಂಘಟನಾ ಕಾರ್ಯದರ್ಶಿ ಪುಷ್ಪ ಕುಲಾಲ್ ಉಪಸ್ಥಿತರಿದ್ದರು.
Post a comment