ಕಾರ್ಕಳ,ಸೆ11: ಉಡುಪಿ-ಚಿಕ್ಕಮಗಳೂರು ಸಂಸದರಾಗಿ ಲೋಕಸಭಾ ಕ್ಷೇತ್ರದಲ್ಲಿ ಜನಪರ ಕೆಲಸ ಮಾಡಿ ಇದೀಗ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಶೋಭಾ ಕರಂದ್ಲಾಜೆ ಅವರು ಕಾರ್ಕಳ ಭಾರತೀಯ ಜನತಾ ಪಾರ್ಟಿ ಕಚೇರಿಗೆ ಭೇಟಿ ನೀಡಿದ ಸಂದರ್ಭ ಅವರನ್ನು ಪಕ್ಷದ ಹಿರಿಯರಾದ ಬೋಳ ಪ್ರಭಾಕರ ಕಾಮತ್ ಅವರು ಶಾಲು ಹೊದಿಸಿ ಪುಷ್ಪ ಗುಚ್ಛ ನೀಡಿ ಸನ್ಮಾನಿಸಿದರು.
ಈ ವೇಳೆ ಕಾರ್ಕಳ ಶಾಸಕ, ರಾಜ್ಯ ಸರಕಾರದ ಮುಖ್ಯ ಸಚೇತಕ ವಿ ಸುನಿಲ್ ಕುಮಾರ್,ಜಿಲ್ಲಾ ಉಪಾಧ್ಯಕ್ಷ ಮಣಿರಾಜ್ ಶೆಟ್ಟಿ,ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಪಕ್ಷದ ಪ್ರಮುಖ ಸುವೃತ್ ಕುಮಾರ್,ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್ ಸಾಲ್ಯಾನ್, ನವೀನ್ ನಾಯಕ್, ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಕೋಟಿಯನ್, ರೇಷ್ಮಾ ಉದಯ ಶೆಟ್ಟಿ, ಮಾಜಿ ಪುರಸಭಾ ಸದಸ್ಯರಾದ ಪ್ರಕಾಶ್ ರಾವ್, ಹೆಬ್ರಿ ತಾಲೂಕು ಪಂಚಾಯತ್ ಸದಸ್ಯರಾದ ಮಾಲಿನಿ ಶೆಟ್ಟಿ, ಸ್ಥಳೀಯ ಜನಪ್ರತಿನಿಧಿಗಳು,ಕಾರ್ಯಕರ್ತರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
Post a comment