ಕೇಂದ್ರ ಸಚಿವ ಸುರೇಶ್ ಅಂಗಡಿ (65) ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ವಾರ ಸುರೇಶ್ ಅಂಗಡಿ ಅವರಿಗೆ ಕೊರೊನಾ ಸೋಂಕು ತಗುಲಿತ್ತು.
ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ನಿಧನರಾಗಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಸುರೇಶ್ ಅಂಗಡಿ ಪ್ರತಿನಿಧಿಸುತ್ತಿದ್ದರು. ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಪ್ರಬಲ ಮುಖಂಡರಾಗಿದ್ದರು.
ಕೇಂದ್ರ ಸಚಿವ ಸಂಪುಟದ ರಾಜ್ಯ ರೈಲ್ವೇ ಸಚಿವರಾಗಿ ಕೆಲಸ ಮಾಡುತ್ತಿದ್ದರು. ಅಧಿವೇಶನ ಆರಂಭವಾದಾಗ ಎಲ್ಲ ಸಂಸದರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಅಂಗಡಿ ಅವರಿಗೆ ಸೋಂಕು ತಗುಲಿರೋದು ದೃಢಪಟ್ಟಿತ್ತು.
Post a comment