ಹೆಬ್ರಿ:ಮಟ್ಕಾ ಜೂಜಿಗೆ ಹಣ ಸಂಗ್ರಹಿಸುತ್ತಿದ್ದ ವ್ಯಕ್ತಿಯ ಬಂಧನ-Times of karkala

ಹೆಬ್ರಿ,ಸೆ.15:ಮಟ್ಕಾ ಜೂಜಿಗೆ ಹಣ ಸಂಗ್ರಹಿಸುತ್ತಿದ್ದ ವ್ಯಕ್ತಿಯನ್ನು  ಹೆಬ್ರಿ ಪೊಲೀಸ್ ಠಾಣೆ ಪಿಎಸ್ಐ ಸುಮ.ಬಿ  ಇಂದು ಬಂಧಿಸಿದ್ದಾರೆ. 

ಘಟನೆಯ ವಿವರ:

ಕುಚ್ಚೂರು ಗ್ರಾಮದ ಸಳ್ಳೆಕಟ್ಟೆಯ ರಾಮಾಂಜನೇಯ ರೈಸ್ ಮಿಲ್  ಬಳಿ ಇರುವ ಬಸ್ಸು ನಿಲ್ದಾಣದ ಬಳಿ ಮಟ್ಕಾ ಜುಗಾರಿ ಎಂಬ ಆಟ ಆಡುತ್ತಿದ್ದಾರೆ ಎಂಬುದಾಗಿ ಬಂದ ಖಚಿತ ಮಾಹಿತಿಯಂತೆ  ಹೆಬ್ರಿ ಪೊಲೀಸ್ ಠಾಣೆ ಪಿಎಸ್ಐ ಸುಮ.ಬಿ ರವರು  ನ್ಯಾಯಾಲಯದಿಂದ ಅನುಮತಿ ಪಡೆದು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಕಾರ್ಯಾಚರಣೆ ನಡೆಸಿದಾಗ  ಆರೋಪಿ ವಿಠಲ ನಾಯ್ಕ ಸಾರ್ವಜನಿಕ ಸ್ಥಳದಲ್ಲಿ  ನಿಂತುಕೊಂಡು ಒಂದು ರೂಪಾಯಿಗೆ 70 ಎಂದು ಮಟ್ಕಾ ಜೂಜಾಟಕ್ಕೆ ಜನರನ್ನು ಕರೆದು ಚೀಟಿಯ ಮೇಲೆ ಪೆನ್ನಿನಿಂದ ಅಂಕಿಗಳನ್ನು ಬರೆಯುತ್ತಿದ್ದನು ಹಾಗೂ ಆತನು ತನ್ನ ಸ್ವಂತ ಲಾಭಕ್ಕಾಗಿ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸುತ್ತಿರುವುದನ್ನು  ಖಚಿತಪಡಿಸಿಕೊಂಡು ಸಿಬ್ಬಂದಿಗಳೊಂದಿಗೆ  ಸ್ಥಳಕ್ಕೆ 14-45  ಗಂಟೆಗೆ ದಾಳಿ ಮಾಡಿ ಆತನ ಬಳಿ ಇದ್ದ 520 ರೂಪಾಯಿ ನಗದು, ಮಟ್ಕಾ ನಂಬ್ರ ಬರೆದ ಚೀಟಿ ಹಾಗೂ ಬಾಲ್ ಪೆನ್ನನ್ನು ಮಹಜರು ಮುಖೇನ ಸ್ವಾಧೀನ ಪಡಿಸಿಕೊಂಡಿದ್ದು ಈ ಬಗ್ಗೆ  ಹೆಬ್ರಿ ಪೊಲೀಸ್‌ ಠಾಣಾಯಲ್ಲಿ  ಪ್ರಕರಣ ದಾಖಲಾಗಿದೆ.

 

ಜಾಹೀರಾತು
































Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget