ಬೆಳ್ಮಣ್ಣು,ಸೆ.05:ನೆಹರು ಯುವ ಕೇಂದ್ರ ಉಡುಪಿ, ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಅಬ್ಬನಡ್ಕ-ನಂದಳಿಕೆ ಮತ್ತು ಜೇಸಿಐ ಬೆಳ್ಮಣ್ಣು ಇದರ ಸಂಯುಕ್ತ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನ ರಂಗಮಂದಿರಲ್ಲಿ ಸರ್ವಪಳ್ಳಿ ರಾಧಕೃಷ್ಣನ್ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.

"ಭಾರತ ದೇಶದ ಬಡ ಕುಟುಂಬದಲ್ಲಿ ಜನಿಸಿ ಇಚ್ಚಾಶಕ್ತಿ, ಕ್ರಿಯಾಶಕ್ತಿ ಮತ್ತು ಜ್ಞಾನ ಶಕ್ತಿ ಇದ್ದರೆ ಏನು ಬೇಕಾದರು ಸಾಧಿಸಬಹುದು ಎನ್ನುವುದಕ್ಕೆ ಬಹುದೊಡ್ಡ ಉದಾಹರಣೆಯಾಗಿ ನಿಲ್ಲುತ್ತಾರೆ ಶ್ರೇಷ್ಠ ಶಿಕ್ಷಕ, ಶಿಕ್ಷಣ ತಜ್ಞ, ತತ್ವಜ್ಞಾನಿ ಮತ್ತು ಭಾರತ ಕಂಡ ಮೊದಲ ಉಪರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್.ಇವರು ಶಿಕ್ಷಕರೆಡೆಗೆ ಅಪಾರ ಗೌರವ, ಪ್ರೀತಿ, ನಿಷ್ಠೆ ಹೊಂದಿದ್ದು ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್ ಭಾರತ ದೇಶ ಕಂಡ ಅಗ್ರಗಣ್ಯ ಶಿಕ್ಷಕರು ಹಾಗಾಗಿ ಅವರ ಜನ್ಮದಿನವನ್ನು ದೇಶದೆಲ್ಲೆಡೆ ನಾವೆಲ್ಲ ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಬಂದಿರುತ್ತೇವೆ"ಎಂದು ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಅಬ್ಬನಡ್ಕ-ನಂದಳಿಕೆಯ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಹೇಳಿದರು.
ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಅಬ್ಬನಡ್ಕ-ನಂದಳಿಕೆಯ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಬೆಳ್ಮಣ್ಣು ಜೇಸಿಐನ ಅಧ್ಯಕ್ಷರಾದ ಜೇಸಿ. ಸತ್ಯನಾರಾಯಣ ಭಟ್ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಅಬ್ಬನಡ್ಕ-ನಂದಳಿಕೆಯ ಪೂರ್ವಾಧ್ಯಕ್ಷರಾದ ಬಿರೋಟ್ಟು ದಿನೇಶ್ ಪೂಜಾರಿ, ಕಾಸ್ರಬೈಲು ಸುರೇಶ್ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಪೂಜಾರಿ, ಸದಸ್ಯರಾದ ಲಲಿತಾ ಆಚಾರ್ಯ, ಸುರೇಶ್ ಪೂಜಾರಿ ಅಬ್ಬನಡ್ಕ, ಪದ್ಮಶ್ರೀ ಪೂಜಾರಿ, ಶರತ್ ದೇವಾಡಿಗ ಮೊದಲಾದವರಿದ್ದರು.
Post a comment