ಹಿರಿಯ ಗಾಯಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ(74) ಗಾಯನವನ್ನು ನಿಲ್ಲಿಸಿದ್ದಾರೆ. ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್ಪಿಬಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ.
ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ಇಂದು ಚಿಕಿತ್ಸೆ ಫಲಕಾರಿಯಾಗದೆ ವಿಧಿ ವಶರಾಗಿದ್ದಾರೆ.
ಆಗಸ್ಟ್ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟಕ್ಕೆ ತೊಂದರೆಯಾಗಿದ್ದರಿಂದ ಎಸ್ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ಪರೀಕ್ಷೆಯಿಂದ ಅವರಿಗೆ ಕೋವಿಡ್–19 ಸೋಂಕಿನ ಲಕ್ಷಣಗಳಿರುವುದು ದೃಢಪಟ್ಟಿತ್ತು. ಮನೆಯಲ್ಲಿಯೇ ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚಿಸಿದ್ದರು. ಆದರೆ, ಕುಟುಂಬದ ಸದಸ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕದಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕವೇ ಅವರಿಗೆ ಚಿಕಿತ್ಸೆ ನಿಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಮೃತ ಅಂತ್ಯಕ್ರಿಯೆ ಚೆನ್ನೈನ ಫಾರ್ಮ್ ಹೌಸ್ ನಲ್ಲಿ ನಡೆಯುವ ಬಗ್ಗೆ ಮಾಹಿತಿ ಸಿಕ್ಕಿದೆ.
Post a comment