ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ವತಿಯಿಂದ ವಿವಿದೆಡೆ ರಕ್ತದಾನ ಶಿಬಿರ-Times of karkala

ಉಡುಪಿ:ಪ್ರಧಾನಿ ಶ್ರೀ ನರೇಂದ್ರ ಮೋದಿಯವರ 70 ನೇ ಹುಟ್ಟುಹಬ್ಬದ ಅಂಗವಾಗಿ ಉಡುಪಿ ಜಿಲ್ಲಾ ಯುವಮೋರ್ಚಾ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಮಂಡಲಗಳ ವ್ಯಾಪ್ತಿಯಲ್ಲಿ ಯುವ ಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರವನ್ನು ಅಯೋಜಿಸಲಾಯಿತು.


ಜಿಲ್ಲೆಯಾದ್ಯಂತ ಯುವಮೋರ್ಚಾದ ಕಾರ್ಯಕರ್ತರು ಸಕ್ರಿಯವಾಗಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ, 523 ಯೂನಿಟ್ ರಕ್ತವನ್ನು ಸಂಗ್ರಹಿಸುವ ಮೂಲಕ ನರೇಂದ್ರ ಮೋದಿ ಯವರ ಹುಟ್ಟು ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ವಿಖ್ಯಾತ್ ಶೆಟ್ಟಿ, ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ಶ್ವೇತಾ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಕ್ಷಿತ್ ಶೆಟ್ಟಿ ಹೆರ್ಗ, ಶರತ್ ಶೆಟ್ಟಿ ಉಪ್ಪುಂದ, ವಿವಿಧ ಮಂಡಲಗಳ ಯುವಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget