ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : "ಕನಸು" ವಿಶೇಷ ಕಾರ್ಯಕ್ರಮ-Times Of Karkala

ಕಾರ್ಕಳ,ಅ.17: ಪ್ರತಿಯೊಂದು ಸಾಧನೆಯೂ ಒಂದು ಕನಸಿನಿಂದ ಹುಟ್ಟಿಕೊಳ್ಳುತ್ತದೆ. ಅಂತಹ ನೂರಾರು ಕನಸನ್ನು ಹೊತ್ತಂತಹ ನಮ್ಮ ಗ್ರಾಮೀಣ ಭಾಗದ ಯುವ ಪ್ರತಿಭೆಗಳಿಗೆ ವಿವಿಧ ಕಾರ್ಯಕ್ರಮಗಳ ಮೂಲಕ ಅವರ ಪ್ರತಿಭೆಗೆ ಸೂಕ್ತ ವೇದಿಕೆ ನಿರ್ಮಿಸಲು ನಮ್ಮ ಸಂಸ್ಥೆಯು ಯೋಜನೆಯನ್ನು ರೂಪಿಸುತ್ತಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಬೋಳ ಉದಯ್ ಅಂಚನ್ ಹೇಳಿದರು.



ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಕುಂಟಲಗುಂಡಿಯಲ್ಲಿರುವ  ಸಂಘದ ರಂಗಮಂದಿರದಲ್ಲಿ ಆದಿತ್ಯವಾರ ಜರಗಿದ 21ನೇ ವರ್ಷದ ವರ್ಷಾಚರಣೆಯ ಪ್ರಯುಕ್ತ ಜರಗಿದ "ಕನಸು" ವಿಶೇಷ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ  ಸಂದೀಪ್ ಪೂಜಾರಿ, ನಿಕಟ ಪೂರ್ವಾಧ್ಯಕ್ಷ ಸತೀಶ್ ಪೂಜಾರಿ, ಪೂರ್ವಾಧ್ಯಕ್ಷರಾದ ರಘುವೀರ್ ಶೆಟ್ಟಿ, ದಿನೇಶ್ ಪೂಜಾರಿ, ಸುರೇಶ್ ಪೂಜಾರಿ, ರಾಜೇಶ್ ಕೋಟ್ಯಾನ್, ಮಹಿಳಾ ಸಂಘಟನಾ ಕಾರ್ಯದರ್ಶಿ ಪುಷ್ಪಾ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಪ್ರಶಾಂತ್ ಪೂಜಾರಿ ಸ್ವಾಗತಿಸಿದರು, ಕಾರ್ಯದರ್ಶಿ ಹರಿಪ್ರಸಾದ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು, ಕೋಶಾಧಿಕಾರಿ ವೀಣಾ ಪೂಜಾರಿ ವಂದಿಸಿದರು.


ಜಾಹೀರಾತು




https://www.timesofkarkala.in/2020/10/blog-post_8.html













Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget