ಬೆಂಗಳೂರು,ಅ.18:ಕಿರುತೆರೆ ಹಾಗೂ ಕನ್ನಡ ಚಿತ್ರರಂಗದ ಹಿರಿಯ ನಟ ಕೃಷ್ಣ ನಾಡಿಗ್ ಶನಿವಾರ ರಾತ್ರಿ ನಿಧನ ಹೊಂದಿದ್ದಾರೆ. ಅವರಿಗೆ ಶನಿವಾರ ರಾತ್ರಿ ಚಿತ್ರೀಕರಣದಲ್ಲಿ ತೊಡಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು.
ಕನ್ನಡದ ಪ್ರಸಿದ್ಧ ಧಾರಾವಾಹಿಗಳಲ್ಲಿ ನಟಿಸಿದ್ದ ಅವರು, ಸುಮಾರು 50 ವರ್ಷಗಳ ಕಾಲ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.
ಭಾನುವಾರ ಚಾಮರಾಜಪೇಟೆಯಲ್ಲಿ ಕೃಷ್ಣ ನಾಡಿಗ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Post a comment