ಬ್ರಿಗೇಡ್ ರಸ್ತೆಗೆ ಹೊಂದಿಕೊಂಡಿರುವ ಆರ್.ಎಚ್.ಪಿ ರಸ್ತೆಯಲ್ಲಿರುವ ಡ್ಯೂಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ (45) ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಚಿಕ್ಕಮಗಳೂರಿನ ಕೊಪ್ಪದ ಮನೀಶ್ ಶೆಟ್ಟಿ, ಕೆಲ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಬಾರ್ ತೆರೆದಿದ್ದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್, ‘ಬೈಕ್ನಲ್ಲಿ ಬಂದ ದುಷ್ಕರ್ಮಿಗಳು, ಬಾರ್ ಮುಂಭಾಗದಲ್ಲೇ ಮನೀಶ್ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.
Post a comment