ಮಂಗಳೂರು, ಅ.18: ಮೀನು ಸಾಗಾಟ ಮಾಡುತ್ತಿದ್ದ ಟೆಂಪೋದಲ್ಲಿ ಭಾರಿ ಪ್ರಮಾಣದ ಗೋಮಾಂಸ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಡೀಲು ಬಳಿ ನಡೆದಿದೆ. ಭಜರಂಗ ದಳದ ಕಾರ್ಯಕರ್ತರ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಕಾರ್ಯಾಚರಣೆ ಯಶಸ್ವಿಯಾಗಿದೆ.
ಸಂದೇಹ ಬಂದ ಹಿನ್ನೆಲೆಯಲ್ಲಿ ಬಜರಂಗ ದಳ ಕಾರ್ಯಕರ್ತರು ಅಡ್ಯಾರು ಕನ್ನೂರಿನಿಂದ ಟೆಂಪೋ ಬೆನ್ನಟ್ಟಿ ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಟೆಂಪೋನ ಅಡ್ಡಕಟ್ಟಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಎರಡು ಸಾವಿರ ಕೆಜಿಗೂ ಅಧಿಕ ಮಾಂಸ ಪತ್ತೆಯಾಗಿದ್ದು, ಹುಬ್ಬಳ್ಳಿಯಿಂದ ತರಿಸಿಕೊಂಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a comment