ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಯುವ ನಡಿಗೆ ಎಂಬ ಘೋಷವಾಕ್ಯ ದಲ್ಲಿ ನವೆಂಬರ್ 1ರಂದು 7.30 ಕ್ಕೆ ಸರಿಯಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ 34 ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ನಡೆಯಲಿದೆ.
ಡ್ರಗ್ಸ್ ವಿರುದ್ಧ ಯುವಕರಲ್ಲಿ, ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಕಳ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸುಹಾಸ್ ಶೆಟ್ಟಿ ಮುಟ್ಲುಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a comment