ಯಡಿಯೂರಪ್ಪ ಕೆಲ ದಿನದಲ್ಲಿ ಅಧಿಕಾರ ಕಳೆದುಕೊಳ್ಳುತ್ತಾರೆ: ಯತ್ನಾಳ್ -Times Of Karkala

ವಿಜಯಪುರ, ಅ.20:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸವನಗೌಡ  ಪಾಟೀಲ್ ಯತ್ನಾಳ್ ಹೇಳಿದ್ದಾರೆ. 

ನಗರದಲ್ಲಿ ನಿನ್ನೆ ರಾತ್ರಿ ನಡೆದ ಹನುಮಂತ ದೇವಸ್ಥಾನದ ಕಂಪೌಂಡ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರ ನಂತರ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಾರೆ. ಇನ್ನು ಬಹಳ ದಿನ ಅವರು ಅಧಿಕಾರದಲ್ಲಿ ಇರುವುದಿಲ್ಲ. ಮೇಲಿನವರಿಗೂ ಅವರು ಬೇಡವಾಗಿದೆ. ಈ ಹಿನ್ನೆಲೆಯಲ್ಲಿ ಮೊನ್ನೆ ಉಮೇಶ್ ಕತ್ತಿಯವರು, ಯಡಿಯೂರಪ್ಪ ಶಿವಮೊಗ್ಗ ಮುಖ್ಯಮಂತ್ರಿಯೋ?ಕರ್ನಾಟಕ ಮುಖ್ಯಮಂತ್ರಿಯೋ? ಎಂದು ವ್ಯಂಗ್ಯವಾಡಿದ್ದಾರೆ ಎಂದರು. 
ಮಂಡ್ಯ , ಚಾಮರಾಜನಗರ, ಕೋಲಾರದಲ್ಲಿ ಯಾರಾದರೂ ಬಿಜೆಪಿಗೆ ಓಟು ಹಾಕ್ತಾರಾ? ಎಂದು ಪ್ರಶ್ನಿಸಿದ ಅವರು ,ಉತ್ತರ ಕರ್ನಾಟಕದವರೇ 100 ಶಾಸಕರನ್ನು ಆಯ್ಕೆ ಮಾಡಿ ಕಳಿಸಿರುತ್ತಾರೆ. ಹಾಗಾಗಿ ಮುಂದಿನ ಮುಖ್ಯಮಂತ್ರಿ ಉತ್ತರ ಕರ್ನಾಟಕದವರೇ ಆಗಿರುತ್ತಾರೆ. ಪ್ರಧಾನ ಮಂತ್ರಿಗಳ ಮನಸ್ಸಿನಲ್ಲಿ ಈ ವಿಚಾರ ಬಂದಿದೆ. ಯಡಿಯೂರಪ್ಪ ಬಳಿಕ ಉತ್ತರ ಕರ್ನಾಟಕದವರಿಗೆ ಸಿಎಂ ಮಾಡೋಣ ಎಂದಿದ್ದಾರೆ. ಅದು ಕೂಡ ಬಹುತೇಕ ಫೈನಲ್ ಆಗಿದೆ ಎಂದು ತಿಳಿಸಿದ್ದಾರೆ. 
ಈಮೂಲಕ ನವೆಂಬರ್, ಡಿಸೆಂಬರ್ ವೇಳೆ ಮುಖ್ಯಮಂತ್ರಿ ಬದಲಾವಣೆ ಖಚಿತ ಎನ್ನುವ ಮಾಹಿತಿಯನ್ನು ಯತ್ನಾಳ್   ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಸಚಿವ ಸಂಪುಟ ಪುನಾರಚನೆಗೆ ಹಾಗೂ ವಿಸ್ತರಣೆಗೆ ಮುಂದಾಗಿದ್ದ ಯಡಿಯೂರಪ್ಪನಿಗೆ ಹೈಕಮಾಂಡ್ ಯಾವುದೇ ಮಾಹಿತಿ ನೀಡದೆ ರಾಜ್ಯಕ್ಕೆ ವಾಪಾಸ್ ಕಳಿಸಿದ್ದಾರೆ.   

ಜಾಹೀರಾತು
https://www.timesofkarkala.in/2020/10/blog-post_8.html

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget