ಮಂಗಳೂರು,ಅ.31:ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಹಿತ, ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದ ಮೂಲತ ಕಾಸರಗೋಡು ಜಿಲ್ಲೆಯ ಅಡೂರಿನವರಾದ ಹಿರಿಯ ಐ ಎ ಎಸ್ ಅಧಿಕಾರಿ ಎ ಬಿ ಇಬ್ರಾಹಿಂ ಗುರುವಾರ ಸರಕಾರಿ ಸೇವೆಯಿಂದ ನಿವೃತ್ತರಾಗಿದ್ದಾರೆ.
ಕೆಎಎಸ್ ಅಧಿಕಾರಿಯಾಗಿ ರಾಜ್ಯ ಸರಕಾರದ ಸೇವೆ ಆರಂಭಿಸಿದ ಅವರು ಮೊದಲಿಗೆ ಉಪವಿಭಾಗಾಧಿಕಾರಿಯಾಗಿದ್ದರು. 1996ರಿಂದ 2000ದವರೆಗೆ ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರಾಗಿದ್ದರು.
ನಂತರ ವರ್ಗಾವಣೆಗೊಂಡು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ, ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ, ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಐಎಎಸ್ ಗೆ ಭಡ್ತಿಗೊಂಡು 2013ರ ಡಿಸೆಂಬರ್ ನಿಂದ 2016ರ ಜುಲೈ ವರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದರು. ನಂತರ ಕರ್ನಾಟಕ ಗೃಹಮಂಡಳಿ ಆಯುಕ್ತ, ಕರ್ನಾಟಕ ನಗರ ಮೂಲ ಸೌಕರ್ಯ ಮಂಡಳಿ ವ್ಯವಸ್ಥಾಪಕ ನಿರ್ದೇಶಕ,ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
Post a comment